ಬೆಂಗಳೂರು: ನಗರದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಬಿಟ್ಟು ಬಿಡದಂತೆ ನಿರಂತರವಾಗಿ ಸುರಿಯುತ್ತಿದೆ. ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿದೆ.
ಎಲೆಕ್ಟ್ರಾನಿಕ್ ಸಿಟಿ, ಕೆ.ಆರ್ ಮಾರ್ಕೆಟ್, ಯಲಹಂಕ, ಓಕಳಿಪುರ, ಸರ್ಜಾಪುರ, ಹೆಬ್ಬಾಳ ಸೇರಿದಂತೆ ಹಲವು ಕಡೆ ಮಳೆಯಿಂದ ತೊಂದರೆಯಾಗಿದೆ. ಹಲವು ಕಡೆ ಮರಗಳು ಧರೆಗುರುಳಿವೆ.
ನಿನ್ನೆ ಸಂಜೆಯಿಂದ ಇಂದು ಬೆಳಗ್ಗೆ 6 ಗಂಟೆವರೆಗೆ ಮಳೆ ಮುಂದುವರಿದೆ. ನಗರದಲ್ಲಿ 66.0 ಮಿಮೀ ಮಳೆ ದಾಖಲಾಗಿದೆ. ಚಿಕ್ಕಬಳ್ಳಾಪುರದಲ್ಲಿ 130 ಮಿಮೀ ಹಾಗೂ ಬೀದರ್ ಜಿಲ್ಲೆಯಲ್ಲಿ 112 ಮಿಮೀ ಮಳೆ ಸುರಿದಿದೆ. ಸೆಪ್ಟೆಂಬರ್ 24 ರ ವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


