ಆಪರೇಷನ್ ಸಿಂಧೂರ ಶುರುಮಾಡಿದ್ದ ಭಾರತೀಯ ಸೇನೆ ಈಗ ಆಪರೇಷನ್ ಕೆಲ್ಲರ್ ಶುರು ಮಾಡಿದೆ. ಪಹಲ್ಗಾಂನಲ್ಲಿ ದಾಳಿ ಮಾಡಿದ್ದ ಉಗ್ರರೂ ಸೇರಿದಂತೆ ಜಮ್ಮು ಕಾಶ್ಮೀರ ಹಾಗೂ ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರಿಗೆ ಶೋಧ ಮುಂದುವರಿದಿದೆ.
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಹೊಡೆದುರುಳಿಸಿದೆ.
ಶೋಪಿಯಾನ್ ಜಿಲ್ಲೆಯ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ ಹಾಗೂ ಸಿಆರ್‌ಪಿಎಫ್ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ಭದ್ರತಾ ಪಡೆಗಳು ಶಂಕಿತರ ಸ್ಥಳಕ್ಕೆ ತೆರಳುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ದಿಟ್ಟ ತಿರುಗೇಟು ನೀಡಿದ್ದು ಮೂವರು ಉಗ್ರರನ್ನ ಬೇಟೆಯಾಡಿದ್ದಾರೆ.