ಗಡಿ ದಾಟಿ ಪಾಕಿಸ್ತಾನದ ಸೇನೆಯಿಂದ ಬಂಧನಕ್ಕೊಳಗಾಗಿದ್ದ ಬಿಎಸ್ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಬೆಳಗ್ಗೆ 10.30ಕ್ಕೆ ಅಟ್ಟಾರಿ-ವಾಘಾ ಗಡಿಯಲ್ಲಿ ಭಾರತಕ್ಕೆ ಹಸ್ತಾಂತರ ಮಾಡಿದ್ದಾರೆ ಎಂದು ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಸ್ಪಷ್ಟನೆ ನೀಡಿದೆ.
ಸದ್ಯ ಭದ್ರತಾ ಪಡೆಯ ಅಧಿಕಾರಿಗಳು ಶಾ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.ಏಪ್ರಿಲ್ 23 ರಂದು ಪಂಜಾಬ್‌ನ ಫಿರೋಜ್‌ಪುರ ಬಳಿ ಆಕಸ್ಮಿಕವಾಗಿ ಅಂತರಾಷ್ಟ್ರೀಯ ಗಡಿಯನ್ನು ದಾಟಿದ ನಂತರ ಜವಾನ್ ಶಾ ಅವರನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದರು.
ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಪ್ರೋಟೋಕಾಲ್ ಪ್ರಕಾರ ಭಾರತೀಯ ಸೇನೆಗೆ ಹಸ್ತಾಂತರ ಮಾಡಲಾಗಿದೆ. 10 ದಿನಗಳ ಕಾಲ ಪಾಕಿಸ್ತಾನದ ವಶದಲ್ಲಿದ್ದ ಶಾ ಅವರು ಭಾರತೀಯ ಸೇನಾ ಕಣ್ಗಾವಲಿನಲ್ಲಿದ್ದಾರೆ.ಭಾರತೀಯ ಯೋಧ ವೈರಿ ರಾಷ್ಟ್ರದಿಂದ ಸುರಕ್ಷಿತವಾಗಿ ಬಿಡುಗಡೆಯಾಗಿರೋದು ಹೆಮ್ಮೆಯ ವಿಷಯವಾಗಿದೆ.


