
ದೆಹಲಿ: ಉನ್ನತ ಶಿಕ್ಷಣಕ್ಕಾಗಿ ತೆರಳಿದ್ದ ಕೆನಡಾಗೆ 24 ವರ್ಷದ ಭಾರತೀಯ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆ ಆಗಿದ್ದಾನೆ. ಕೊಲೆ ಶಂಕೆ ಮೂಡಿದೆ. ತನ್ನ ಆಡಿ ಕಾರಿನಲ್ಲಿ ಗುಂಡಿಕ್ಕಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದೆ. ಕೆನಡಾದ ಸೌತ್ ವ್ಯಾಂಕೋವರ್ನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಮೃತ ಯುವಕನನ್ನು ಚಿರಾಗ್ ಅಂಟಿಲ್ ಎಂದು ಗುರುತಿಸಲಾಗಿದೆ. ಗುಂಡಿನ ಸದ್ದು ಕೇಳಿದ ನೆರೆಮನೆಯವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ ಎನ್ನಲಾಗಿದೆ.