Thursday, November 20, 2025
19.1 C
Bengaluru
Google search engine
LIVE
ಮನೆಕ್ರಿಕೆಟ್ಭಾರತದ ಮುಡಿಗೆ ವಿಶ್ವಕಪ್? ಭವಿಷ್ಯ ನುಡಿಯುತ್ತಿದೆ ಹೀಗೊಂದು ಕಾಕತಾಳೀಯ

ಭಾರತದ ಮುಡಿಗೆ ವಿಶ್ವಕಪ್? ಭವಿಷ್ಯ ನುಡಿಯುತ್ತಿದೆ ಹೀಗೊಂದು ಕಾಕತಾಳೀಯ

Cricket : ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್ ಫೈನಲ್​ನಲ್ಲಿ ಮೂರನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಈ ಹಿಂದೆ ಅಂದರೆ 2012 ಮತ್ತು 2018ರಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು. ಈ ಎರಡೂ ಫೈನಲ್‌ಗಳಲ್ಲಿ ಭಾರತ ಜಯಭೇರಿ ಬಾರಿಸಿತ್ತು.
ಅಂಡರ್ 19 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮೂರನೇ ಬಾರಿಗೆ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆರಂಭಿಸಿದ್ದು, ಎರಡೂ ತಂಡಗಳಿಂದ ಸಮಬಲದ ಹೋರಾಟ ನಡೆಸಯುತ್ತಿವೆ.

ಅಂದಹಾಗೆ ಮೇಲೆ ಹೇಳಿದಂತೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್ ಫೈನಲ್​ನಲ್ಲಿ ಮೂರನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಈ ಹಿಂದೆ ಅಂದರೆ 2012 ಮತ್ತು 2018ರಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು. ಈ ಎರಡೂ ಫೈನಲ್‌ಗಳಲ್ಲಿ ಭಾರತ ಜಯಭೇರಿ ಬಾರಿಸಿತ್ತು.
ಕಾಕತಾಳೀಯವೆಂಬಂತೆ ಇದೀಗ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಆರಂಭಿಸಿರುವ ಆಸ್ಟ್ರೇಲಿಯಾ, ಈ ಹಿಂದಿನ ಎರಡು ಮುಖಾಮುಖಿಗಳಲ್ಲೂ ಸಹ ಮೊದಲು ಬ್ಯಾಟಿಂಗ್‌ ಮಾಡಿತ್ತು. ಆದರೆ ಪಂದ್ಯವನ್ನು ಗೆಲ್ಲುವಲ್ಲಿ ವಿಫಲವಾಗಿತ್ತು. ಇದೀಗ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಆಸ್ಟ್ರೇಲಿಯಾ ಈ ಪಂದ್ಯವನ್ನು ಸೋಲಲಿದೆ ಎಂಬುದು ಅಭಿಮಾನಿಗಳ ಲೆಕ್ಕಾಚಾರವಾಗಿದೆ.

2012 ರಲ್ಲಿ ಉಭಯ ತಂಡಗಳ ನಡುವೆ ಮೊದಲ ಬಾರಿಗೆ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಆಸ್ಟ್ರೇಲಿಯಾ ತಂಡ 8 ವಿಕೆಟ್ ನಷ್ಟಕ್ಕೆ 226 ರನ್ ಗಳ ಟಾರ್ಗೆಟ್ ನೀಡಿತ್ತು. ಈ ಗುರಿ ಬೆನ್ನಟ್ಟಿದ ಭಾರತ ತಂಡ ನಾಯಕ ಉನ್ಮುಕ್ತ್ ಚಂದ್ ಅಜೇಯ 111 ರನ್​ಗಳ ಇನ್ನಿಂಗ್ಸ್ ಆ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ಟೀಂ ಇಂಡಿಯಾ ಈ ಫೈನಲ್ ಪಂದ್ಯವನ್ನು 6 ವಿಕೆಟ್​ಗಳಿಂದ ಗೆದ್ದುಕೊಂಡಿತ್ತು.

ನಂತರ ಅಂದರೆ 2018 ರಲ್ಲಿ ನಡೆದ ಅಂಡರ್-19 ವಿಶ್ವಕಪ್ ಫೈನಲ್‌ನಲ್ಲೂ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ತಂಡ ಭಾರತಕ್ಕೆ 217 ರನ್‌ಗಳ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ಭಾರತ 38.5 ಓವರ್‌ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿ ಚಾಂಪಿಯನ್ ಆಯಿತು. ತಂಡದ ಪರ ಮಂಜೋತ್ ಕಾಲ್ರಾ ಅಜೇಯ 101 ರನ್‌ಗಳ ಇನ್ನಿಂಗ್ಸ್ ಆಡಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments