Thursday, November 20, 2025
19.9 C
Bengaluru
Google search engine
LIVE
ಮನೆದೇಶ/ವಿದೇಶಜಮ್ಮು-ಕಾಶ್ಮೀರದ ಕುಪ್ವಾರಾದಲ್ಲಿ ಒಳನುಸುಳುವಿಕೆ ಪ್ರಯತ್ನ ವಿಫಲ, ಸೇನೆಯಿಂದ ಇಬ್ಬರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದ ಕುಪ್ವಾರಾದಲ್ಲಿ ಒಳನುಸುಳುವಿಕೆ ಪ್ರಯತ್ನ ವಿಫಲ, ಸೇನೆಯಿಂದ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಕೇರನ್​​ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್​​​​ ಕೌಂಟರ್​​​​ ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದ್ದಾರೆ ಎಂದು ಭಾರತೀಯ ಸೇನೆ ಎಕ್ಸ್ಪೋಸ್ಟ್​​​ ನಲ್ಲಿ ಮಾಹಿತಿ ಹಂಚಿಕೊಂಡಿದೆ..

ಕೆರಾನ್‌ನಲ್ಲಿ ಒಳನುಸುಳುವಿಕೆ ಬಗ್ಗೆ ಗುಪ್ತಚರ ಮೂಲಗಳಿಂದ ಖಚಿತ ಮಾಹಿತಿ ಪಡೆದ ಸೇನೆ ಆಪರೇಷನ್ ಪಿಂಪಲ್ ಹೆಸರಿನಲ್ಲಿ ಶುಕ್ರವಾರದಿಂದ ಕಾರ್ಯಾಚರಣೆ ಶುರು ಮಾಡಿದೆ ಎಂದು ತಿಳಿಸಿದೆ. ಒಳನುಸುಳುವಿಕೆ ಬಗ್ಗೆ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿದ ಯೋಧರು ವ್ಯಕ್ತಿಗಳನ್ನು ಪ್ರಶ್ನಿಸಿದರು.

ಆಗ ಭಯೋತ್ಪಾದಕರು ಒಂದೇ ಸಮನೆ ಗುಂಡು ಹಾರಿಸಲು ಪ್ರಯತ್ನಿಸಿದರು. ಪ್ರತಿದಾಳಿಯನ್ನು ಭದ್ರತಾ ಪಡೆ ಯೋಧರು ಮಾಡಿದಾಗ ಇಬ್ಬರು ಉಗ್ರರು ಹತರಾದರು ಎಂದು ಚಿನಾರ್ ಕಾರ್ಪ್ಸ್ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದೆ. ಮೊನ್ನೆ ಬುಧವಾರ ಮುಂಜಾನೆ ಕಿಶ್ತ್ವಾರ್ ಜಿಲ್ಲೆಯ ದೂರದ ಛಾತ್ರು ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದ ಮೂರು ದಿನಗಳ ನಂತರ ಇದು ನಡೆದಿದೆ.

ಸೇನಾ ಪಶ್ಚಿಮ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಮನೋಜ್ ಕುಮಾರ್ ಕಟಿಯಾರ್ ಅವರು ಜಮ್ಮು-ಪಠಾಣ್‌ಕೋಟ್ ವಲಯದ ಉದ್ದಕ್ಕೂ ಮುಂಭಾಗದ ಪ್ರದೇಶಗಳಲ್ಲಿ ಬೀಡುಬಿಟ್ಟಿರುವ ಪಡೆಗಳ ಕಾರ್ಯಾಚರಣೆಯ ಸನ್ನದ್ಧತೆಯನ್ನು ನಿರ್ಣಯಿಸಿದ್ದಾರೆ.

ಚಳಿಗಾಲದ ತಿಂಗಳುಗಳಿಗೆ ಯೋಧರು ಸಜ್ಜಾಗುತ್ತಿರುವಾಗ, ಜಮ್ಮು ವಲಯದ ಎತ್ತರದ ಪ್ರದೇಶಗಳಲ್ಲಿ ಮತ್ತು ಅರಣ್ಯ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕರಿಂದ ಬರುವ ಬೆದರಿಕೆಗಳನ್ನು ಎದುರಿಸಲು ಅವರು ಸಿದ್ಧರಾಗಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಪರಿಶೀಲನೆ ನಡೆಸುತ್ತಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments