Sunday, February 15, 2026
20 C
Bengaluru
Google search engine
LIVE
ಮನೆಸುದ್ದಿಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೆ ಸೈಬರ್ ವಂಚಕರ ಕಾಟ

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೆ ಸೈಬರ್ ವಂಚಕರ ಕಾಟ

ಬೆಂಗಳೂರು: ಇನ್ಫೋಸಿಸ್ ಫೌಂಡೇಷನ್ ಮಾಜಿ ಮುಖ್ಯಸ್ಥೆ ಹಾಗೂ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿಗೆ ಸೈಬರ್ ವಂಚಕರು ಯಾಮಾರಿಸಲು ಯತ್ನಿಸಿದ್ದಾರೆ. ಸೆ.5 ರಂದು ಸುಧಾಮೂರ್ತಿ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ಹೇಳಿದ್ದ. ಬಳಿಕ ನಿಮ್ಮ ಮೊಬೈಲ್ ನಂಬರ್ ಅನ್ನು ಆಧಾರ್‌ಗೆ ಲಿಂಕ್ ಮಾಡದೆ ನೋಂದಾಯಿಸಲಾಗಿದೆ ಎಂದಿದ್ದ.

ಜೊತೆಗೆ ನಿಮ್ಮ ನಂಬರ್ ನಿಂದ ಅಶ್ಲೀಲ ವಿಡಿಯೋ ಕಳಿಸಲಾಗ್ತಿದೆ. ಅದನ್ನು ನಿಲ್ಲಿಸಲಾಗಿದೆ ಎಂದು ಬೆದರಿಕೆ ಹಾಕಿದ್ದಾನೆ ಅಂತ ದೂರು ನೀಡಿದ್ದಾರೆ. ಟ್ರೂಕಾಲರ್ ನಲ್ಲಿ ಆ ನಂಬರ್ ಚೆಕ್ ಮಾಡಿದಾಗ ಟೆಲಿಕಾಂ ಡೆಪಾರ್ಟ್ ಮೆಂಟ್‌ ಅಂತ ಬಂದಿದೆ. ಈ ವೇಳೆ ಸುಧಾಮೂರ್ತಿ ಅವರು ಸೈಬರ್ ವಂಚಕರ ಟ್ರ್ಯಾಪ್ ಗೆ ಒಳಗಾಗದೆ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಸುಧಾಮೂರ್ತಿ ಅವರು ಯಾವುದೇ ಹಣವನ್ನು ಸೈಬರ್ ವಂಚಕರಿಗೆ ನೀಡಿಲ್ಲ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments