Top Newsರಾಜ್ಯಸುದ್ದಿ

ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ -2025 ರ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಮಾತನಾಡಿ, ರೈತರ ಬಹುದಿನಗಳ ಬೇಡಿಕೆಯಾಗಿರುವ ಕನಿಷ್ಠ ಬೆಂಬಲ ಬೆಲೆ ಜಾರಿಗೆ ತರುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ರು.

“ಭಾರತ ಕೃಷಿ ದೇಶ ಮತ್ತು ನಾವು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಆಹಾರದ ಕೊರತೆ ಇತ್ತು. ಆದರೆ ಈಗ, ಭಾರತವು ಅನೇಕ ಆಹಾರ ಧಾನ್ಯಗಳನ್ನು ರಫ್ತು ಮಾಡುತ್ತಿರುವುದು ಹೆಮ್ಮೆಯ ವಿಷಯ” ಎಂದು ಸಿಎಂ ಹೇಳಿದರು.

ಸಾವಯವ ಕೃಷಿ ವ್ಯವಸ್ಥೆಯ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲು 2013 ರಲ್ಲಿ ರಾಜ್ಯವು “ಸಾವಯವ ಭಾಗ್ಯ ಯೋಜನೆ”ಯನ್ನು ಪ್ರಾರಂಭಿಸಿತು. ಹೋಬಳಿ ಮಟ್ಟದಲ್ಲಿ ಮಾದರಿ ಸಾವಯವ ಗ್ರಾಮಗಳನ್ನು ಘೋಷಿಸಲಾಯಿತು ಮತ್ತು ರೈತರಿಗೆ ಪ್ರೋತ್ಸಾಹಿಸಲಾಯಿತು ಎಂದು ಸಿಎಂ ಹೇಳಿದರು.

Comments (0)

Your email address will not be published. Required fields are marked *

Back to top button