ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಶ್ರೀ ಆದಿತ್ಯಾ ಆಮ್ಲಾನ್ ಬಿಶ್ವಾಸ್, ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಪಾಲಿಕೆ ಕೇಂದ್ರ ಕಛೇರಿಯ ಅನೆಕ್ಸ್ 3ನೇ ಮಹಡಿಯಲ್ಲಿ ಇಂಟಿಗ್ರೇಟೆಡ್ ಕಮಾಂಡ್ ಕಂಟ್ರೋಲ್ ಸೆಂಟರ್ ನಲ್ಲಿ ಮತಗಟ್ಟೆಗಳ ವೆಬ್ ಕಾಸ್ಟಿಂಗ್ ಅನ್ನು ವೀಕ್ಷಿಸಿದರು.
ಈ ವೇಳೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ದಯಾನಂದ್, ಎಂಸಿಸಿ ನೋಡಲ್ ಅಧಿಕಾರಿಯಾದ ಶ್ರೀ ಮುನೀಶ್ ಮೌದ್ಗಿಲ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.