Top Newsರಾಜಕೀಯರಾಜ್ಯಸುದ್ದಿ

ಬಿಜೆಪಿ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ : ಬೇಸರ ಹೊರ ಹಾಕಿದ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿತ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯವಾಗಿದೆ. ಜನ ಸಾಮಾನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ನೋಡಿದಾಗ ಅದರ ವಿರುದ್ಧ ಸಮರ ಸಾರಬೇಕಾಗಿರುವ ಭಾರತೀಯ ಜನತಾ ಪಕ್ಷ ಆಂತರಿಕ ಭಿನ್ನಾಭಿಪ್ರಾಯದಿಂದ ಮಾತಿನ ಸಮರ ನಡೆಸುತ್ತಿರುವುದು ಅತ್ಯಂತ ದುರಷ್ಟಕರ ಎಂದು ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ.

ಇಡೀ ದೇಶಕ್ಕೆ ಸಮರ್ಥ ಆಡಳಿತ ಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ನೇತೃತ್ವದ ಈ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲರನ್ನೂ ಒಂದುಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನು ಒಬ್ಬ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಮೊಮ್ಮಾಯಿ ಅವರು ಹೇಳಿದರು.

ಎರಡೂ ಕಡೆ ತಾಳ್ಮೆಯನ್ನು ಕಳೆದುಕೊಳ್ಳದೆ ಕರ್ನಾಟಕ ಬಿಜೆಪಿಯ ಸರ್ಮೋಚ್ಚ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಇತರ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಒಟ್ಟಿಗೆ ಕುಳಿತು ಮಾತುಕತೆ ಮೂಲಕ ಇದನ್ನು ಬಗೆಹರಿಸಬೇಕು.ಇಲ್ಲದಿದ್ದರೆ ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಬೇಕು.

ಈ ವೇಳೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ವಿಚಾರದಲ್ಲಿ ಮಾಜಿ ಪ್ರಧಾನಮಂತ್ರಿಗಳಾದ ಮಾನ್ಯ ಎಚ್.ಡಿ ದೇವೇಗೌಡರು ಪ್ರಸ್ತಾಪ ಮಾಡಿದ್ದು ಸರಿ ಇದೆ. ಕರ್ನಾಟಕದಲ್ಲಿ ದಲಿತರ ದುರ್ಬಳಕ್ಕೆ, ಅಧಿಕಾರಿಗಳ ಆತ್ಮಹತ್ಯೆ, ಭ್ರಷ್ಟಾಚಾರ ಮಿತಿಮೀರಿರುವುದು, 136 ಶಾಸಕರಿದ್ದರೂ ಅಭದ್ರತೆಯ ವಾತಾವರಣ ಸಂಬಂಧಿತ ದೇವೇಗೌಡರ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆಯವರು ಆಕ್ಷೇಪ ಎತ್ತಲು ಯಾವುದೇ ಕಾರಣ ಇಲ್ಲ. ದಲಿತರಿಗೆ ಅನ್ಯಾಯ ಮಾಡಿದ ಕಾಂಗ್ರೆಸ್ಸಿನ ವಿರುದ್ಧವಾಗಿ ಮಾನ್ಯ ಕರ್ಗೆಜೀ ಅವರೇ ಮಾತನಾಡಬೇಕಿತ್ತು ಎಂದು ಅಭಿಪ್ರಾಯಪಟ್ಟರು.

Comments (0)

Your email address will not be published. Required fields are marked *

Back to top button