Tuesday, February 24, 2026
21.7 C
Bengaluru
Google search engine
LIVE
ಮನೆ#Exclusive NewsTop Newsರಾಜ್ಯದಲ್ಲಿ ಆಂತರಿಕ ಭದ್ರತೆ ಹೈ ಅಲರ್ಟ್; ಬಾಂಗ್ಲಾದೇಶಿಯರ ಪತ್ತೆಗೆ ಅಭಿಯಾನ

ರಾಜ್ಯದಲ್ಲಿ ಆಂತರಿಕ ಭದ್ರತೆ ಹೈ ಅಲರ್ಟ್; ಬಾಂಗ್ಲಾದೇಶಿಯರ ಪತ್ತೆಗೆ ಅಭಿಯಾನ

ದೆಹಲಿಯಲ್ಲಿ ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯ ಶಂಕಿತರ ಬಂಧನದ ಬೆನ್ನಲ್ಲೇ ಕರ್ನಾಟಕದಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ರಾಜ್ಯದ ಆಂತರಿಕ ಭದ್ರತಾ ವಿಭಾಗ ಅತೀವ ಜಾಗರೂಕತೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಯರನ್ನು ಪತ್ತೆಹಚ್ಚುವ ಅಭಿಯಾನವನ್ನು ತೀವ್ರಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ರಂಜಾನ್ ಮತ್ತು ಹೋಳಿ ಹಬ್ಬಗಳ ಹಿನ್ನೆಲೆ ರಾಜ್ಯಾದ್ಯಂತ ಶಾಂತಿ ಕಾಪಾಡಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹಬ್ಬದ ಹೆಸರಲ್ಲಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. 16 ವರ್ಷದೊಳಗಿನ ಮಕ್ಕಳ ವಿದ್ಯಾಭ್ಯಾಸದ ಮೇಲೆ ಮೊಬೈಲ್ ಬೀರುತ್ತಿರುವ ನಕಾರಾತ್ಮಕ ಪರಿಣಾಮಗಳ ಬಗ್ಗೆ ಸರ್ಕಾರ ಗಂಭೀರವಾಗಿ ಆಲೋಚಿಸುತ್ತಿದೆ. ಜಾಗತಿಕ ಅಧ್ಯಯನಗಳನ್ನು ಗಮನದಲ್ಲಿಟ್ಟುಕೊಂಡು, ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾಧಕ-ಬಾಧಕಗಳನ್ನು ಪರಿಶೀಲಿಸಲಾಗುವುದು ಎಂದಿದ್ದಾರೆ.

ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗಳನ್ನು ಮತ್ತೆ ಆರಂಭಿಸುವ ಬಗ್ಗೆ ಒತ್ತಡ ಕೇಳಿಬರುತ್ತಿದೆ. ಈ ಹಿಂದೆ ಘರ್ಷಣೆಗಳ ಕಾರಣಕ್ಕೆ ಇದನ್ನು ನಿಷೇಧಿಸಲಾಗಿತ್ತು. ಈಗ ಇದನ್ನು ಮರುಪರಿಶೀಲಿಸುವ ಕುರಿತು ಸಚಿವ ಸಂಪುಟದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರತಿಕ್ರಿಯೆ ನೀಡಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments