ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ವಿಧಾನಸೌಧದ ಮುಂದೆ ಪ್ರಜಾಪ್ರಭುತ್ವದ ಉಳಿವು, ಸಮಸಮಾಜದ ನಿರ್ಮಾಣಕ್ಕಾಗಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಚಾಮರಾಜನಗರದಿಂದ ಬೀದರ್​ವರೆಗೂ 2,500 ಕಿಲೋಮೀಟರ್ ಮಾನವ ಸರಪಳಿ ರಚನೆಗೆ ಸಿಎಂ ಚಾಲನೆ ನೀಡಿದ್ದಾರೆ.

ಬೆಂಗಳೂರು, ಸೆ.15: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಇಡೀ ಕರ್ನಾಟಕ ರಾಜ್ಯದಲ್ಲಿ ಅಲ್ಲಲ್ಲಿ ಮಾನವ ಸರಪಳಿ ರಚಿಸಿ ಆಚರಣೆ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಪ್ರಜಾಪ್ರಭುತ್ವದ ಉಳಿವು, ಸಮಸಮಾಜದ ನಿರ್ಮಾಣಕ್ಕಾಗಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಚಾಲನೆ ನೀಡಿದ್ದಾರೆ. ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಸಭಾಪತಿ ಬಸವರಾಜ ಹೊರಟ್ಟಿ, ಡೆಪ್ಯುಟಿ ಸ್ಪೀಕರ್ ರುದ್ರಪ್ಪ‌ಲಮಾಣಿ, ಶಾಸಕ ರಿಜ್ವಾನ್ ಹರ್ಷದ್, ಅಧಿಕಾರಿಗಳು ಭಾಗಿಯಾಗಿದ್ದರು.

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಚಾಮರಾಜನಗರದಿಂದ ಬೀದರ್​ವರೆಗೂ 2,500 ಕಿಲೋಮೀಟರ್ ಮಾನವ ಸರಪಳಿ ರಚನೆ ಮಾಡುವ ಕಾರ್ಯಕ್ರಮಕ್ಕೆ ವಿಧಾನಸೌಧದ ಮುಂದೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಪ್ರಜಾಪ್ರಭುತ್ವದ ಉಳಿವು, ಸಮ ಸಮಾಜದ ನಿರ್ಮಾಣಕ್ಕಾಗಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ 25 ಲಕ್ಷ ಜನರು ಭಾಗಿಯಾಗುತ್ತಿದ್ದಾರೆ. ಕಾರ್ಯಕ್ರಮದ ಭಾಗವಾಗಿ 10 ಲಕ್ಷ ಸಸಿಗಳನ್ನು ನೆಡಲು ತಯಾರಿ ನಡೆದಿದೆ. ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಸಚಿವರು ಮಾನವ ಸರಪಳಿಯಲ್ಲಿ ಭಾಗಿಯಾಗಿದ್ದಾರೆ. ವಿದ್ಯಾರ್ಥಿಗಳು, ರೈತರು, ಆಯಾ ಸಂಘಟನೆಗಳು ಸೇರಿ ಹಲವರು ಭಾಗಿಯಾಗಿದ್ದಾರೆ.

Leave a Reply

Your email address will not be published. Required fields are marked *

Verified by MonsterInsights