Monday, June 23, 2025
26.6 C
Bengaluru
Google search engine
LIVE
ಮನೆಟೆಕ್ ಲೈಫ್Invest Karnataka: ಅಭೂತಪೂರ್ವ ಯಶಸ್ಸು ಕಂಡಿದೆ ; ಸಚಿವ ಎಂ.ಬಿ.ಪಾಟೀಲ್

Invest Karnataka: ಅಭೂತಪೂರ್ವ ಯಶಸ್ಸು ಕಂಡಿದೆ ; ಸಚಿವ ಎಂ.ಬಿ.ಪಾಟೀಲ್

ವಿಜಯಪುರ: “ಇನ್ವೆಸ್ಟ್ ಕರ್ನಾಟಕ-2025” ಅಭೂತಪೂರ್ವ ಯಶಸ್ಸು ಕಂಡಿದೆ ಎಂದು ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ.

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸಮಾವೇಶದಲ್ಲಿ 10.27 ಲಕ್ಷ ಕೋಟಿ ಬಂಡವಾಳ ಹೂಡಿಕೆ ಒಪ್ಪಂದವಾಗಿದ್ದು, ಆರು ಲಕ್ಷ ಜನರಿಗೆ ಉದ್ಯೋಗವಕಾಶ ಸೃಷ್ಟಿಯಾಗಿದೆ. ಅದರಲ್ಲಿ ಶೇ.75ರಷ್ಟು ಬೆಂಗಳೂರು ಹೊರತು ಪಡಿಸಿ ಮತ್ತು ಅದರಲ್ಲಿ ಶೇ.45ರಷ್ಟು ಉತ್ತರ ಕರ್ನಾಟಕದಲ್ಲಿ ಹೂಡಿಕೆಯಾಗಲಿದೆ. ಕಲ್ಯಾಣ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಪಾಲಿಗೆ ಇದೊಂದು ಆಶಾದಾಯಕ ಬೆಳವಣಿಗೆ, ಪ್ರಮುಖವಾಗಿ ಉತ್ತರ ಕರ್ನಾಟಕದಲ್ಲಿ ಬಂಡವಾಳ ಹೂಡಲು ಅನೇಕ ಉದ್ದಿಮೆದಾರರು ಮುಂದೆ ಬಂದಿದ್ದಾರೆ. ಪ್ರಪ್ರಥಮ ಬಾರಿಗೆ ಪ್ರಪಂಚದ 60ಕ್ಕೂ ಅಧಿಕ ಪರಿಣಿತರು, ಉದ್ದಿಮೆದಾರರು ಭಾಗವಹಿಸಿದ್ದರು ಎಂದು ಹೇಳಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments