ರಾಜಕೀಯರಾಜ್ಯಸುದ್ದಿ

ಮುಡಾ ಕೇಸ್​ನಲ್ಲಿ ಸಿಎಂಗೆ ಮತ್ತೆ ಎದುರಾಗುತ್ತಾ ಸಂಕಷ್ಟ?

ಮೈಸೂರು: ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಲೋಕಾಯುಕ್ತ ತನಿಖೆಯಲ್ಲಿ ಕ್ಲೀನ್​ಚಿಟ್ ಸಿಕ್ಕಿತ್ತು. ಸದ್ಯ ಮುಡಾ ಕೇಸ್​ನಲ್ಲಿ ರಿಲೀಫ್ ಮೂಡ್​ನಲ್ಲಿರವ ಸಿಎಂಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಎಂ ವಿರುದ್ಧದ ಲೋಕಾಯುಕ್ತ ತನಿಖೆ ವರದಿ ವಿಚಾರವಾಗಿ ದೂರುದಾರ ಸ್ನೇಹಮಯಿ ಕೃಷ್ಣ ಇದೀಗ ಗಂಭೀರ ಆರೋಪ ಮಾಡಿದ್ದಾರೆ.  ಆರೋಪಿ ಮಲ್ಲಿಕಾರ್ಜುನ ಸ್ವಾಮಿ 1998ರಲ್ಲಿ ದೇವರಾಜ್ ಸಹಿ ನಕಲು ಮಾಡಿದ್ದರು ಎಂಬ ದಾಖಲೆ ಮುಂದಿಟ್ಟಿದ್ದಾರೆ. ಈ ವಿಚಾರವನ್ನು ಲೋಕಾಯುಕ್ತ ವರದಿಯಲ್ಲಿ ಮುಚ್ಚಿಡಲಾಗಿದೆ. ಇದನ್ನೇ ಮುಂದಿಟ್ಟುಕೊಂಡು ಸಿಬಿಐ ತನಿಖೆಗೆ ಆದೇಶಿಸುವಂತೆ ನ್ಯಾಯಾಲಯದಲ್ಲಿ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button