HUBLIರಾಜ್ಯಸುದ್ದಿ

ಜಿಮ್ ಪ್ರೇಮದ ಹಿಂದೆ ‘ಲವ್ ಜಿಹಾದ್’ ಬಲೆ..?

ಹುಬ್ಬಳ್ಳಿ: ನಗರದಲ್ಲಿ ಮತ್ತೊಂದು ‘ಲವ್ ಜಿಹಾದ್’ ಮತ್ತು ಮತಾಂತರ ಯತ್ನದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಮೀರ್ ಎಂಬ ಯುವಕನನ್ನು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ. ನಗರದ ವಿಜಯನಗರ ನಿವಾಸಿಯಾದ ಸಮೀರ್, ವಿಕಾಸ ನಗರದ ಹಿಂದೂ ಯುವತಿಯನ್ನು ಜಿಮ್‌ನಲ್ಲಿ ಪರಿಚಯಿಸಿಕೊಂಡಿದ್ದ ಎನ್ನಲಾಗಿದೆ. ಪರಿಚಯ ಬೆಳೆದಂತೆ ಯುವತಿಯನ್ನು ಪ್ರೀತಿಸುವ ನಾಟಕವಾಡಿ, ಆಕೆಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಸಂಚು ರೂಪಿಸಿದ್ದಾನೆ ಎಂಬುದು ಸಂಘಟನೆಗಳ ಪ್ರಮುಖ ಆರೋಪವಾಗಿದೆ.

ಈ ವಿಷಯ ತಿಳಿದ ತಕ್ಷಣ ಕಾರ್ಯಕರ್ತರು ಸಮೀರ್‌ನನ್ನು ಹಿಡಿದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಯುವತಿಯನ್ನು ನಂಬಿಸಿ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದಾನೆ ಎಂದು ಆರೋಪಿಸಿ ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹುಬ್ಬಳ್ಳಿಯಲ್ಲಿ ಇಂತಹ ಪ್ರಕರಣಗಳು ಪದೇ ಪದೇ ವರದಿಯಾಗುತ್ತಿರುವುದು ಸ್ಥಳೀಯವಾಗಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಹಳೇ ಹುಬ್ಬಳ್ಳಿ ಪೊಲೀಸರು ಸಮೀರ್‌ನನ್ನು ವಶಕ್ಕೆ ಪಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಯುವತಿ ಮತ್ತು ಆತನ ಹಿನ್ನೆಲೆಯನ್ನು ತನಿಖೆಗೊಳಪಡಿಸಿದ್ದಾರೆ. ಪೊಲೀಸರ ವಿಚಾರಣೆಯ ನಂತರವಷ್ಟೇ ಈ ಆರೋಪಗಳ ಹಿಂದಿನ ನೈಜ ಸತ್ಯಾಂಶ ಹೊರಬರಬೇಕಿದೆ.

Comments (0)

Your email address will not be published. Required fields are marked *

Back to top button