Friday, September 12, 2025
20.8 C
Bengaluru
Google search engine
LIVE
ಮನೆ#Exclusive Newsಪ್ರಧಾನಿ ಮೋದಿಗೆ ಜೀವ ಬೆದರಿಕೆ :ಪಾಕಿಸ್ತಾನದ ISI ಸಂಚು; ಮುಂಬೈ ಪೊಲೀಸರಿಗೆ ಬಂತು ಬೆದರಿಕೆ ಸಂದೇಶ

ಪ್ರಧಾನಿ ಮೋದಿಗೆ ಜೀವ ಬೆದರಿಕೆ :ಪಾಕಿಸ್ತಾನದ ISI ಸಂಚು; ಮುಂಬೈ ಪೊಲೀಸರಿಗೆ ಬಂತು ಬೆದರಿಕೆ ಸಂದೇಶ

ಮುಂಬೈ: ಮುಂಬೈ ಟ್ರಾಫಿಕ್ ಪೊಲೀಸರಿಗೆ ಇಂದು ಮೆಸೇಜ್ ಒಂಂದು ಬಂದಿದ್ದು, ಅದರಲ್ಲಿ ಪಾಕಿಸ್ತಾನದ ಪ್ರಧಾನ ಸಂಸ್ಥೆಯಾದ ಐಎಸ್‌ಐ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಬಾಂಬ್ ಸ್ಫೋಟದ ಮೂಲಕ ಮೋದಿಯ ಹತ್ಯೆ ನಡೆಸಬಹುದು ಎಂದು ಮೆಸೇಜ್ ಕಳುಹಿಸುವವರು ಆರೋಪಿಸಿದ್ದಾರೆ. ಈ ಸಂದೇಶದಲ್ಲಿ ಇಬ್ಬರು ವ್ಯಕ್ತಿಗಳನ್ನು ಹೆಸರಿಸಲಾಗಿದ್ದು, ಅವರು ಪಾಕಿಸ್ತಾನದ ಐಎಸ್‌ಐ ಏಜೆಂಟ್‌ಗಳಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಮುಂಬೈ ಪೊಲೀಸರಿಗೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಸಂದೇಶ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈ ಟ್ರಾಫಿಕ್ ಪೊಲೀಸರ ಸಹಾಯವಾಣಿಗೆ ಬಂದ ವಾಟ್ಸಾಪ್ ಸಂದೇಶದಲ್ಲಿ ಇಬ್ಬರು ಐಎಸ್‌ಐ ಏಜೆಂಟ್‌ಗಳು ಪ್ರಧಾನಿ ನರೇಂದ್ರ ಮೋದಿಯನ್ನು ಗುರಿಯಾಗಿಸಿಕೊಂಡು ಬಾಂಬ್ ಸ್ಫೋಟ ನಡೆಸುವ ಸಂಚನ್ನು ನಡೆಸಲಿದ್ದಾರೆ ಎಂದು ಸಂದೇಶದಲ್ಲಿ ಉಲ್ಲೇಖಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಸಂದೇಶ ಕುರಿತು ಮಾತನಾಡಿರುವ ಇಲಾಖೆಯ ಹಿರಿಯ ಅಧಿಕಾರಿಗಳು, ‘ಇಂತಹ ಸಂದೇಶಗಳನ್ನು ಕಳುಹಿಸುವವರು ಮಾನಸಿಕ ಅಸ್ವಸ್ಥ ವ್ಯಕ್ತಿ ಅಥವಾ ಮದ್ಯದ ಅಮಲಿನಲ್ಲಿದ್ದವರಾಗಿರುತ್ತಾರೆ. ಮುಂಬೈ ಟ್ರಾಫಿಕ್ ಪೊಲೀಸರ ಸಹಾಯವಾಣಿಗೆ ಈ ಹಿಂದೆ ಇಂತಹ ಹಲವು ಹುಸಿ ಬೆದರಿಕೆ ಸಂದೇಶಗಳು ಬಂದಿದ್ದವು.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments