Thursday, November 20, 2025
24.6 C
Bengaluru
Google search engine
LIVE
ಮನೆಜಿಲ್ಲೆಹೊಸ ವರ್ಷದ ದಿನವೇ ಇಸ್ರೋ ಸಾಧನೆ ನಭಕ್ಕೆ ಜಿಗಿದ ಎಕ್ಸ್ ಪೋ ಸ್ಯಾಟ್ ಉಪಗ್ರಹ!

ಹೊಸ ವರ್ಷದ ದಿನವೇ ಇಸ್ರೋ ಸಾಧನೆ ನಭಕ್ಕೆ ಜಿಗಿದ ಎಕ್ಸ್ ಪೋ ಸ್ಯಾಟ್ ಉಪಗ್ರಹ!


ಬೆಂಗಳೂರು : ಹೊಸ ವರ್ಷದ ದಿನವೇ ಭಾರತೀಯರ ಹೆಮ್ಮೆಯ ಸಂಸ್ಥೆ ಇಸ್ರೋ ಹೊಸ ಇತಿಹಾಸ ನಿರ್ಮಿಸಿದೆ. ಕಪ್ಪು ಕುಳಿಗಳ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ ಯಶಸ್ವಿಯಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಪಿಎಸ್‍ಎಲ್‍ವಿ ಮೂಲಕ ಈ ಉಪಗ್ರಹ ಉಡಾವಣೆ ಮಾಡಲಾಗಿದೆ.


ಈ ಮೂಲಕ ದೇಶದ ಮೊದಲ ಎಕ್ಸ್-ರೇ ಪೋಲರಿಮೀಟರ್ ಉಪಗ್ರಹ ಎಕ್ಸ್‌ಪೋಸ್ಯಾಟ್ ಉಡಾವಣೆ ಯಶಸ್ವಿಯಾಗಿದ್ದು, ಹೊಸ ವರ್ಷದ ದಿನವೇ ಇಸ್ರೋ ಇತಿಹಾಸ ನಿರ್ಮಿಸಿದೆ. ಇದರೊಂದಿಗೆ ಪಿಎಸ್‍ಎಲ್‍ವಿ ಇತರ ಹತ್ತು ಉಪಗ್ರಹಗಳನ್ನು ಹೊತ್ತೊಯ್ದಿದೆ. ಈ ಉಪಗ್ರಹಗಳನ್ನು ಸ್ಟಾರ್ಟ್‍ಅಪ್ಸ್, ಶೈಕ್ಷಣಿಕ ಸಂಸ್ಥೆಗಳು ಮತ್ತು ಇಸ್ರೋ ಕೇಂದ್ರಗಳು ನಿರ್ಮಾಣ ಮಾಡಿದೆ.


ಪಲ್ಸಾರ, ಕಪ್ಪು ಕುಳಿ ,ಎಕ್ಸ್-ರೇ ಬೈನರಿಗಳು, ಸಕ್ರಿಯ ಗ್ಯಾಲಕ್ಸಿಯ ನ್ಯೂಕ್ಲಿಯಸ್‍ಗಳು, ನ್ಯೂಟ್ರಾನ್ ನಕ್ಷತ್ರಗಳು ಮತ್ತು ಸೂಪರ್‍ನೋವಾ ಅವಶೇಷಗಳ ಅಧ್ಯಯನ ನಡೆಸಲಿದೆ. ಈ ಮಿಷನ್ ಕನಿಷ್ಠ ಐದು ವರ್ಷಗಳ ಕಾಲ ಸಕ್ರಿಯವಾಗಿ ಕಾರ್ಯನಿರ್ವಹಿಸಲಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments