ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಇಂದು ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಕನ್ನಡಿಗರ ನ್ಯಾಯಯುತ ತೆರಿಗೆ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆಗ್ತಿದೆ. ಎಂದು ಕಾಂಗ್ರೆಸ್ ಆರೋಪಿಸಿ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಹೋರಾಟ ಯಾರ ವಿರುದ್ಧವೂ ಅಲ್ಲ, ಇದು ಕರುನಾಡು ಹಾಗೂ ಕನ್ನಡಿಗರ ಹಿತಕ್ಕಾಗಿ. ಪಕ್ಷಾತೀತವಾಗಿ ಎಲ್ಲರೂ ಈ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಬೇಕೆಂದು ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದಾರೆ.
ಇನ್ನು, ಪ್ರತಿಭಟನೆಗೆ ಮುನ್ನ ಮಾತಾಡಿದ ಸಿಎಂ ಸಿದ್ದರಾಮಯ್ಯ, ಪ್ರತಿಭಟನೆಗೆ ರಾಜ್ಯ ಸರ್ಕಾರದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನಸಭಾ ಸದಸ್ಯರು ಬಂದಿದ್ದಾರೆ. ಬಿಜೆಪಿ ಸಂಸದರಿಗೂ ಆಹ್ವಾನ ನೀಡಿದ್ದೇವೆ. ಅನಿವಾರ್ಯವಾಗಿ ದೆಹಲಿಯಲ್ಲಿ ಪ್ರತಿಭಟನೆ ಮಾಡ್ತಿದ್ದೀವಿ ಎಂದರು.
ಇದು ರಾಜಕೀಯಕ್ಕೋಸ್ಕರ ಮಾಡ್ತಿರೋ ಪ್ರತಿಭಟನೆ ಅಲ್ಲ. ಇದು ಕರ್ನಾಟಕದ ಹಿತವನ್ನ ಕಾಪಾಡಲು ಮಾಡ್ತಿರುವ ಚಳವಳಿ. ಇಂದಿನ ಈ ಪ್ರತಿಭಟನೆ ಐತಿಹಾಸಿಕ ಪ್ರತಿಭಟನೆ ಎಂದರು ಸಿದ್ದರಾಮಯ್ಯ.