ಶ್ರೀರಾಮುಲು ಮನವೊಲಿಕೆಗೆ ಜೆ.ಪಿ.ನಡ್ಡಾ ಎಂಟ್ರಿ..!

ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕಕ್ಕೇರಿದ್ದು, ಪಕ್ಷದ ಆಂತರಿಕ ಘರ್ಷಣೆ ತೀವ್ರವಾಗಿದೆ. ಹಿಂದೆ ಆಪ್ತ ಸಚಿವರಾಗಿದ್ದ ಮಾಜಿ ಸಚಿವರಾದ ಗಾಲಿ ಜನಾರ್ದನ ರೆಡ್ಡಿ ಹಾಗೂ ಬಿ ಶ್ರೀರಾಮುಲು ಅವರ ಮಧ್ಯ ವಾಕ್ಸಮರ ಹೆಚ್ಚುತ್ತಿದ್ದಂತೆ ಹೈಕಮಾಂಡ್ ಮಧ್ಯ ಪ್ರವೇಶಿಸಿದೆ.
ಜನಾರ್ಧನ್ ರೆಡ್ಡಿ ಹಾಗೂ ಶ್ರೀರಾಮುಲು ನಡುವಿನ ಜಗಳ ತಾರಕ್ಕೆರಿದ್ದು,ಇಬ್ಬರೂ ಪತ್ರಿಕಾಗೋಷ್ಠಿ ನಡೆಸಿ ಒಬ್ಬರ ಮೇಲೆ ಒಬ್ಬರು ಆರೋಪಗಳ ಸುರಿಮಳೆ ಸುರಿಸಿದ್ದಾರೆ. ಎಚ್ಚೆತ್ತುಕೊಂಡ ಕೇಂದ್ರ ಸಚಿವ ಜೆ.ಪಿ. ನಡ್ಡಾ ಶ್ರೀರಾಮುಲು ಮನವೊಲಿಕೆಗೆ ಮುಂದಾಗಿದ್ದಾರೆ. ಇಂದು (ಜನವರಿ 23) ಜೆಪಿ ನಡ್ಡಾ ಶ್ರೀರಾಮುಲು ಗೆ ಕರೆ ಮಾಡಿ ದೆಹಲಿಗೆ ಬನ್ನಿ ಕೂತು ಮಾತಾಡೋಣ ಎಂದು ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ. ಈ ವೇಳೆ ಶ್ರೀರಾಮುಲು, ಕೋರ್ ಕಮಿಟಿ ಸಭೆಯಲ್ಲಿ ತಮಗಾದ ಅವಮಾನದ ಬಗ್ಗೆ ಜೆಪಿ ನಡ್ಡಾ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಪಕ್ಷ ಬಿಡುವ ಬಗ್ಗೆ ಹಾಗೂ ಪಕ್ಷದ ವಿರುದ್ಧ ಏನೂ ಮಾತನಾಡಬೇಡಿ. ದೆಹಲಿಗೆ ಬನ್ನಿ ಕುಳಿತುಕೊಂಡು ಮಾತಾಡೋಣ ಎಂದು ನಡ್ಡಾ ಮನವೊಲಿಸಿದ್ದು, ಇದಕ್ಕೆ ಶ್ರೀರಾಮುಲು ಸಹ ಓಕೆ ಸರ್ ಮುಂದಿನ ವಾರ ಬರುವೇ ಎಂದಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಶ್ರೀರಾಮುಲು ದೆಹಲಿಗೆ ತೆರಳಲಿದ್ದು, ಜೆಪಿ ನಡ್ಡಾ, ಬಿಲ್ ಸಂತೋಷ್ ಸೇರಿದಂತೆ ಇತರೆ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ.




