ಜ್ಯೂ.ರೆಬೆಲ್ ಸ್ಟಾರ್, ಅಭಿಷೇಕ್ ಅಂಬರೀಶ್ ಮತ್ತು ಅವಿವ ಮಗುವಿನ ಪಾಲನೆಯಲ್ಲಿ ಬ್ಯುಸಿಯಾಗಿದ್ದು, ಇದರ ನಡುವೆ ಹೊಸದೊಂದು ಫೋಟೋ ಶೂಟ್ ಮಾಡಿಸಿದ್ದಾರೆ. ಮಸ್ತ್ ಆಗಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಚೆಂದದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವಿವ ಹಂಚಿಕೊಂಡಿದ್ದಾರೆ.
ಬಿಳಿ ಬಣ್ಣದ ಉಡುಗೆಯಲ್ಲಿ ಅಭಿಷೇಕ್ ಮತ್ತು ಅವಿವ ದಂಪತಿ ಮಿಂಚಿದ್ದಾರೆ. ಇಬ್ಬರೂ ರೊಮ್ಯಾಂಟಿಕ್ ಆಗಿ ಪೋಸ್ ಕೊಟ್ಟಿದ್ದಾರೆ. ಅಂದಹಾಗೆ, ಸ್ನೇಹಿತೆಯ ಮದುವೆಯಲ್ಲಿ ಭಾಗಿಯಾಗಲು ಅವಿವ ಜೋಡಿ ಮಸ್ತ್ ಆಗಿ ರೆಡಿಯಾಗಿದ್ದಾರೆ.
ಅಂದಹಾಗೆ, ಕಳೆದ ವರ್ಷ ಈ ಜೋಡಿ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಮದುವೆಯಾದರು. ನ.12ರಂದು ಗಂಡು ಮಗುವಿಗೆ ಅವಿವ ಜನ್ಮ ನೀಡಿದರು.
ಇನ್ನೂ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ಬಳಿಕ ಅಭಿಷೇಕ್ ಅವರು ಮದಗಜ, ಅಯೋಗ್ಯ ಡೈರೆಕ್ಟರ್ ಮಹೇಶ್ ಕುಮಾರ್ ಜೊತೆ ಕೈಜೋಡಿಸಿದ್ದಾರೆ. ಈ ಸಿನಿಮಾ ಯಾವಾಗ ಶುರು ಆಗಲಿದೆ ಎಂಬುದನ್ನು ಸದ್ಯದಲ್ಲೇ ಮಾಹಿತಿ ಹೊರಬೀಳಲಿದೆ.