ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಸಂಬಂಧ ಜೈಲು ಸೇರಿರುವ ನಟ ದರ್ಶನ್ ಮನೆಯ ಊಟ ಬೇಕೆಂದು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ವಕೀಲ ಪ್ರವೀಣ್ ತಮ್ಮಯ್ಯ ಮೂಲಕ ದರ್ಶನ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೇ ಹಾಸಿಗೆ, ಪುಸ್ತಕ ಪಡೆಯಲು ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ತುರ್ತು ವಿಚಾರಣೆಗೆ ತೆಗೆದುಕೊಳ್ಳುವಂತೆ ವಕೀಲರು ಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಜೈಲಿನಲ್ಲಿ ನೀಡುತ್ತಿರುವ ಊಟ ಜೀರ್ಣವಾಗುತ್ತಿಲ್ಲ. ಜೈಲಿನ ಊಟ ತಿಂದಾಗ ಅತಿಸಾರ, ಭೇದಿ ಆಗುತ್ತಿದೆ. ಜೈಲಿನ ಆಹಾರ ಒಗ್ಗದೇ ಫುಡ್ ಪಾಯಿಸನಿಂಗ್ ಆಗುತ್ತಿದೆ. ಹೀಗೆಂದು ಜೈಲಿನ ವೈದ್ಯರೇ ಮಾಹಿತಿ ನೀಡಿದ್ದಾರೆ ಎಂದು ದರ್ಶನ್ ಹೈಕೋರ್ಟ್‌ಗೆ ಕಾರಣಗಳನ್ನು ನೀಡಿದ್ದಾರೆ.
ಗುರುವಾರ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಲಿದ್ದಾರೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com