#Exclusive NewsTop Newsರಾಜ್ಯಸುದ್ದಿ

ನಟ ದರ್ಶನ್​ಗೆ ಜೈಲಾ..? ಬೇಲಾ…?

 

ಬೆಂಗಳೂರು: ಚಿತ್ರುದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಮತ್ತು ನಟಿ ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳ ತೀರ್ಪನ್ನು ಹೈಕೋರ್ಟ್ ಇಂದು  ಪ್ರಕಟಿಸಲಿದೆ. ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್,  ಪವಿತ್ರಾ ಗೌಡ, ಮ್ಯಾನೇಜರ್ ಆರ್.ನಾಗರಾಜು, ದರ್ಶನ್ ಕಾರು ಚಾಲಕ ಎಂ.ಲಕ್ಷ್ಮಣ್, ಆಪ್ತರಾದ ಅನುಕುಮಾ‌ರ್, ಜಗದೀಶ್ ಮತ್ತು ಪ್ರದೋಷ್ ರಾವ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರ ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ, ಇಂದು ಮಧ್ಯಾಹ್ನ 2.30ಕ್ಕೆ ತೀರ್ಪು ಪ್ರಕಟಿಸಲಿದೆ. ಇದರಿಂದ ದರ್ಶನ್‌ಗೆ ಜೈಲೋ ಮತ್ತು ಬೈಲೋ ಎಂಬುದು ಇಂದು ಮಧ್ಯಾಹ್ನ ನಿರ್ಧಾರವಾಗಲಿದೆ. ದರ್ಶನ್ ಹಾಗೂ ಇತರೆ ಅರ್ಜಿದಾರರಿಗೆ ಜಾಮೀನು ನಿರಾಕರಿಸಿ ಕಳೆದ ಅ.14ರಂದು ನಗರದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿತ್ತು. ಇದರಿಂದ ಎಲ್ಲಾ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು. ಒಂದೊಮ್ಮೆ ದರ್ಶನ್ ಜಾಮೀನು ಅರ್ಜಿ ವಜಾಗೊಂಡರೆ, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ನಂತರ ಮತ್ತೆ ಜೈಲಿಗೆ ಹೋಗಬೇಕಾಗುತ್ತದೆ. ಜಾಮೀನು ದೊರೆತರೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಮನೆಗೆ ಹೋಗಬಹುದು.

Comments (0)

Your email address will not be published. Required fields are marked *

Back to top button