ಸಿನಿಮಾ

ʻಜನನಾಯಗನ್’ಗೆ ಮುಹೂರ್ತ ಫಿಕ್ಸ್ – ಜು.23ಕ್ಕೆ ವಿಶ್ವದಾದ್ಯಂತ ಸಿನಿಮಾ ರಿಲೀಸ್!

'Jananayagan' release date fixed – Movie to release worldwide on July 23!

ದಳಪತಿ ವಿಜಯ್ ಅಭಿನಯದ ಕೊನೆಯ ಚಿತ್ರ ‘ಜನನಾಯಗನ್’ ಜುಲೈ 23ರಂದು ವಿಶ್ವದಾದ್ಯಂತ ಅತ್ಯಂತ ಅದ್ಧೂರಿಯಾಗಿ ತೆರೆಕಾಣಲು ಸಜ್ಜಾಗಿದೆ. ಈ ಬಹುನಿರೀಕ್ಷಿತ ಸಿನಿಮಾದ ಬಿಡುಗಡೆಯ ದಿನಾಂಕವನ್ನು ನಿರ್ಮಾಣ ಸಂಸ್ಥೆಯಾದ ಕೆವಿಎನ್ ಪ್ರೊಡಕ್ಷನ್ಸ್ ಎಕ್ಸ್‌ನಲ್ಲಿ ಅಧಿಕೃತವಾಗಿ ಘೋಷಿಸಿದೆ.

ಖ್ಯಾತ ನಿರ್ದೇಶಕ ಹೆಚ್. ವಿನೋತ್ ಆ್ಯಕ್ಷನ್ ಕಟ್‌ ಹೇಳಿರುವ ‘ಜನನಾಯಗನ್’ ಸಿನಿಮಾವು ಭರ್ಜರಿ ಆ್ಯಕ್ಷನ್, ಭಾವನಾತ್ಮಕ ಕಥಾಹಂದರ ಹಾಗೂ ಬಲವಾದ ಸಾಮಾಜಿಕ ಸಂದೇಶವನ್ನು ಒಳಗೊಂಡಿದೆ. ಈಗಾಗಲೇ ಚಿತ್ರದ ಪೋಸ್ಟರ್, ಟೀಸರ್ ಮತ್ತು ಹಾಡುಗಳು ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸಿದ್ದು, ಸಿನಿಪ್ರಿಯರಲ್ಲಿ ಮತ್ತು ಅಭಿಮಾನಿಗಳಲ್ಲಿ ಚಿತ್ರದ ಮೇಲಿನ ಕುತೂಹಲವನ್ನು ದುಪ್ಪಟ್ಟು ಮಾಡಿದೆ.

ದಳಪತಿ ವಿಜಯ್ ಅವರು ಸಕ್ರಿಯ ರಾಜಕಾರಣಕ್ಕೆ ಪ್ರವೇಶ ಮಾಡಿದ ಬಳಿಕ ನಟಿಸುತ್ತಿರುವ ಕೊನೆಯ ಸಿನಿಮಾ ಇದಾಗಿದೆ. ಚಿತ್ರದಲ್ಲಿ ವಿಜಯ್‌ಗೆ ನಾಯಕಿಯಾಗಿ ಪೂಜಾ ಹೆಗ್ಡೆ ನಟಿಸಿದ್ದು, ಬಾಲಿವುಡ್ ನಟ ಬಾಬಿ ಡಿಯೋಲ್ ಪ್ರಮುಖ ಪ್ರತಿನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಗೌತಮ್ ವಾಸುದೇವ್ ಮೆನನ್, ಪ್ರಕಾಶ್ ರಾಜ್, ಮಮಿತಾ ಬೈಜು ಸೇರಿದಂತೆ ಹಲವು ಖ್ಯಾತ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ದಳಪತಿ ವಿಜಯ್ ಅವರ ಬೆಳ್ಳಿಪರದೆಯ ಈ ಕೊನೆಯ ಜರ್ನಿಯನ್ನು ಕಣ್ಣುಂಬಿಕೊಳ್ಳಲು ಅಭಿಮಾನಿ ಬಳಗ ಸಜ್ಜಾಗಿದೆ. ಸಿಎಂ ವಿಜಯ್ ಅವರ ಕಟ್ಟುನಿಟ್ಟಿನ ನಿಯಮಗಳ ನಡುವೆಯೂ ಜುಲೈ 23ರಂದು ಬಿಡುಗಡೆಯಾಗಲಿರುವ ‘ಜನನಾಯಗನ್’ ಬಾಕ್ಸ್ ಆಫೀಸ್‌ನಲ್ಲಿ ಯಾವ ರೀತಿಯ ಹೊಸ ದಾಖಲೆಗಳನ್ನು ಬರೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

Comments (0)

Your email address will not be published. Required fields are marked *

Back to top button