ಜೆಡಿಎಸ್ ಪಕ್ಷ ಬಹಳ ಗಟ್ಟಿಯಾಗಿದೆ ; ಜಿ ಡಿ ಹರೀಶ್‌ಗೌಡ

ಮೈಸೂರು : ಜೆಡಿಎಸ್ ಪಕ್ಷದ 18 ಶಾಸಕರು ಒಗ್ಗಟ್ಟಿನಿಂದ ಬಹಳ ಗಟ್ಟಿಯಾಗಿ ಇದ್ದೇವೆ , ಯಾವುದೇ ಕಾರಣಕ್ಕೂ ಪಕ್ಷ ತೊರೆಯಲ್ಲ ಎಂದು ಹುಣಸೂರು ಶಾಸಕ ಜಿ ಡಿ ಹರೀಶ್‌ಗೌಡ ಅವರು ಸ್ಪಷ್ಟಪಡಿಸಿದ್ದಾರೆ.
ಜೆಡಿಎಸ್ ಪಕ್ಷ 18 ಶಾಸಕರು ಒಗ್ಗಟ್ಟಾಗಿದ್ದು, ಪಕ್ಷ ತೊರೆಯುವ ಯಾವುದೇ ಉದ್ದೇಶವಿಲ್ಲ. 140 ಕ್ಷೇತ್ರಗಳಲ್ಲಿ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಮೇಲೆ ಕಣ್ಣಿದೆ. ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಬಲಿಷ್ಟವಾಗಿದೆ. ಕೇಂದ್ರದಲ್ಲಿ ಕುಮಾರಸ್ವಾಮಿಯವರು ಸಚಿವರಾಗಿದ್ದಾರೆ. ಆದ್ದರಿಂದ ನಮ್ಮ ಯಾವುದೇ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಕ್ಷವನ್ನು ಕಟ್ಟುತ್ತೇವೆ. ಮುಂದಿನ ದಿನಗಳಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಸಾಮಾನ್ಯ ಮಾತುಕತೆ ವೇಳೆ ಪಕ್ಷಕ್ಕೆ ಸೇರ್ಪಡೆಯಾಗುವ ಕುರಿತು ಆಲೋಚಿಸುವಂತೆ ಕಾಂಗ್ರೆಸ್ ತಿಳಿಸಿತ್ತು. ಆದರೆ, ಯಾರೊಬ್ಬರೂ ಸಂಪರ್ಕ ಮಾಡಿಲ್ಲ ಎಂದು ಹೇಳಿದರು.




