Friday, August 22, 2025
24.8 C
Bengaluru
Google search engine
LIVE
ಮನೆರಾಜಕೀಯಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

//ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ//

//ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ ಪಕ್ಷದ ನಾಯಕರು//

ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ

**

ಬೆಂಗಳೂರು: ಹೈಕೋರ್ಟ್ ಮತ್ತು ಜನಪ್ರತಿನಿಧಿ ನ್ಯಾಯಾಲಯ ಆದೇಶಗಳ ಹಿನ್ನೆಲೆಯಲ್ಲಿ ಮೂಡ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ.

ಅಲ್ಲದೆ; ಸಿಎಂ ರಾಜೀನಾಮೆಗೆ ಒತ್ತಾಯ ಮಾಡಿ ಜೆಡಿಎಸ್ ಕಾರ್ಯಕರ್ತರು ಪಕ್ಷದ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ರಾಜ್ಯಪಾಲರು ನೀಡಿರುವ ಅನುಮತಿಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಅಲ್ಲದೆ, ಜನ ಪ್ರತಿನಿಧಿ ನ್ಯಾಯಾಲಯ ಸಿಎಂ ವಿರುದ್ಧ ಎಫ್ ಐ ಆರ್ ದಾಖಲಿಸಿ, ಮೂರು ತಿಂಗಳ ಒಳಗಾಗಿ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ರಮೇಶ್ ಗೌಡ ಒತ್ತಾಯ ಮಾಡಿದರು.

ಊರಿಗೆಲ್ಲ ನೈತಿಕತೆಯ ಪಾಠ ಮಾಡುವ ಸಿದ್ದರಾಮಯ್ಯ ಅವರು ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದ ಅವರು; ಅವರು ರಾಜೀನಾಮೆ ಕೊಡದಿದ್ದರೆ ಜೆಡಿಎಸ್ ನಿರಂತರವಾಗಿ ಉಗ್ರ ಹೋರಾಟ ನಡೆಸುತ್ತದೆ ಎಂದು ಎಚ್ಚರಿಕೆ ನೀಡಿದರು.

ಅಧಿಕಾರ ದುರ್ಬಳಕೆ:

ಮುದಾದಲ್ಲಿ ನಿವೇಶನಗಳನ್ನು ಕಬಳಿಸಲು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ಈ ಬಗ್ಗೆ ನ್ಯಾಯಾಲಯಗಳ ಆದೇಶ ಕೂಡ ಸ್ಪಷ್ಟವಾಗಿದೆ. ತಮ್ಮ ಕುಟುಂಬಕ್ಕೆ ಅನುಕೂಲ ಮಾಡಿಕೊಳ್ಳಲು ಸಿಎಂ ಅವರು ಅಧಿಕಾರ ದುರ್ಬಳಕೆ ಜತೆಗೆ ನೈತಿಕ ಮೌಲ್ಯಗಳನ್ನು ಗಾಳಿಗೆ ತೂರಿದ್ದಾರೆ. ಹೀಗಾಗಿ ಒಂದು ಕ್ಷಣವೂ ಅವರು ಅಧಿಕಾರದಲ್ಲಿ ಮುಂದುವರಿದೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಪಡಿಸಿದರು.

ತಮ್ಮ ಪತ್ನಿ ಅವರಿಗೆ ಅನುಕೂಲ ಆಗುವಂತೆ ನಿರ್ಧಾರ ತೆಗೆದುಕೊಳ್ಳುವ ಪ್ರತಿ ಸಲವೂ ಸಿದ್ದರಾಮಯ್ಯ ಅವರು ಪ್ರಭಾವಿ ಹುದ್ದೆಯಲ್ಲಿ ಇದ್ದರು. ಈ ಪ್ರಭಾವದಿಂದ ಅವರು ತಮ್ಮ ಪತ್ನಿ ಅವರಿಗೆ ಕೇವಲ ಎರಡು ನಿವೇಶನಗಳು ದೊರೆಯುಬೇಕಿದ್ದ ಬದಲಿಗೆ 14 ನಿವೇಶನಗಳು ಸಿಕ್ಕಿವೆ. ಇದನ್ನೇ ನ್ಯಾಯಾಲಯ ಗಮನಿಸಿದೆ. ಇನ್ನಾದರೂ ಅವರು ಪದತ್ಯಾಗ ಮಾಡಬೇಕು ಎಂದು ಆಗ್ರಹ ಮಾಡಿದರು.

ವಿಧಾನ ಪರಿಷತ್ ಸದಸ್ಯರಾದ ಕೆ ಎನ್ ತಿಪ್ಪೇಸ್ವಾಮಿ, ಟಿ.ಎ.ಶರವಣ ಸೇರಿದಂತೆ ಜೆಡಿಎಸ್ ನಗರ ಘಟಕದ ಅನೇಕ ಪದಾಧಿಕಾರಿಗಳು, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರು, ಇತರೆ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments