Monday, June 23, 2025
26.6 C
Bengaluru
Google search engine
LIVE
ಮನೆದೇಶ/ವಿದೇಶ26ನೇ ಮುಖ್ಯ ಚುನಾವಣ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕಾರ

26ನೇ ಮುಖ್ಯ ಚುನಾವಣ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕಾರ

ನವದೆಹಲಿ:  ದೇಶದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್  ಅವರು ಅಧಿಕಾರ ಸ್ವೀಕರಿಸಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ನೂತನ ಚುನಾವಣಾ ಅಧಿಕಾರಿಯ ಆಯ್ಕೆ ಸಂಬಂಧ ಮಹತ್ವದ ಸಭೆ ನಡೆಸಿತ್ತು. ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಭಾಗಿಯಾಗಿದ್ದರು.

ಕೇರಳ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು. ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತರಾಗಿರುವ ರಾಜೀವ್ ಕುಮಾರ್ ಇಂದು ನಿವೃತ್ತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments