Virat Kohli ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 16,000, 17,000, 18,000, 19,000, 20,000, 21,000, 22,000, 23,000, 24,000, 25,000, ಮತ್ತು 26,000 ರನ್‌ಗಳನ್ನು ಪೂರೈಸಿದ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಇದೀಗ ಕಿಂಗ್ ಕೊಹ್ಲಿ ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ ಮತ್ತೊಂದು ಭರ್ಜರಿ ದಾಖಲೆ ಬರೆಯುವ ಸನಿಹದಲ್ಲಿದ್ದಾರೆ.
ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆ ಬರೆಯುವ ಹೊಸ್ತಿಲಲ್ಲಿದ್ದಾರೆ. ಅದು ಸಹ ಕೇವಲ 58 ರನ್ಗಳೊಂದಿಗೆ… ಹೌದು, ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 27 ಸಾವಿರ ರನ್ ಪೂರೈಸಲು ವಿರಾಟ್ ಕೊಹ್ಲಿಗೆ ಕೇವಲ 58 ರನ್ಗಳ ಅವಶ್ಯಕತೆಯಿದೆ. ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 58 ರನ್‌ಗಳನ್ನು ಬಾರಿಸಿದರೆ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 27000 ರನ್ ಪೂರೈಸಿದ ವಿಶ್ವ ದಾಖಲೆ ಕಿಂಗ್ ಕೊಹ್ಲಿ ಪಾಲಾಗಲಿದೆ…