Wednesday, January 28, 2026
16.4 C
Bengaluru
Google search engine
LIVE
ಮನೆUncategorizedವಿವಾದಾತ್ಮಕ ನ್ಯಾಯಮೂರ್ತಿ ಸ್ವಯಂ ನಿವೃತ್ತಿ ರಾಜಕೀಯ ರಂಗ ಪ್ರವೇಶ

ವಿವಾದಾತ್ಮಕ ನ್ಯಾಯಮೂರ್ತಿ ಸ್ವಯಂ ನಿವೃತ್ತಿ ರಾಜಕೀಯ ರಂಗ ಪ್ರವೇಶ

ಕೋಲ್ಕತಾ: ಕೋಲ್ಕತಾ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಪಶ್ಚಿಮ ಬಂಗಾಳದ ವಿವಿಧ ಶಿಕ್ಷಣ ಸಂಬಂಧಿತ ವಿಷಯಗಳ ತೀರ್ಪುಗಳು ರಾಜಕೀಯ ಚರ್ಚೆಗಳನ್ನು ಹುಟ್ಟುಹಾಕಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಇನ್ನು ಯಾವ ರಾಜಕೀಯ ಪಕ್ಷಕ್ಕೆ ಸೇರುತ್ತಾರೆ ಎಂಬುದು ನಿಗೂಢವಾಗಿದೆ.

ಅನೇಕ ಪ್ರಕರಣಗಳಲ್ಲಿ ತೃಣಮೂಲ ಕಾಂಗ್ರೆಸ್‌ ಸರಕಾರಕ್ಕೆ ಮುಜುಗುರ ಉಂಟುಮಾಡುವ ತೀರ್ಪು ನೀಡಿದ್ದ ಕೋಲ್ಕತಾ ಹೈಕೋರ್ಟ್‌ ನ್ಯಾಯಮೂರ್ತಿ ಅಭಿಜಿತ್‌ ಗಂಗೋಪಾಧ್ಯಾಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇನ್ನು ಅವರ ಸೇವಾವಧಿ ಒಂಬತ್ತು ತಿಂಗಳು ಇರುವಾಗಲೇ ಪದವಿ ತ್ಯಾಗ ಮಾಡಿದ್ದಾರೆ.ಅವರ ರಾಜೀನಾಮೆಯಿಂದ ಬಿಜೆಪಿ ಸೇರ್ಪಡೆ ಊಹಾಪೋಹಗಳು ಮತ್ತಷ್ಟು ಬಲಗೊಂಡಿದೆ.

ಯಾವ ಪಕ್ಷ ಸೇರಲಿದ್ದಾರೆ?

ಟಿಎಂಸಿ ವಿರುದ್ಧ ರಾಜಕೀಯವಾಗಿ ಯಾವ ರೀತಿಯ ಹೋರಾಟ ನಡೆಸುತ್ತಾರೆ ಎಂಬಿತ್ಯಾದಿ ವಿವರಗಳನ್ನು ಅವರು ಬಹಿರಂಗಪಡಿಸಿಲ್ಲ. ”ಮಂಗಳವಾರ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ, ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹಾಗೂ ಕಲ್ಕತ್ತಾ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ಸಲ್ಲಿಸುವೆ. ಆ ನಂತರ ಎಲ್ಲ ಪ್ರಶ್ನೆಗಳಿಗೆ ಉತ್ತರಿಸುವೆ,” ಎಂದಷ್ಟೇ ಹೇಳಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments