ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಮುಂದಿನ ಸುಪ್ರೀಂ ಕೋರ್ಟ್ ನ ಸಿಜೆಐ ಆಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೆಸರನ್ನು ಕೇಂದ್ರ ಕಾನೂನು ಸಚಿವಾಲಯಕ್ಕೆ ಶಿಫಾರಸು ಮಾಡಿದ್ದಾರೆ.
ಸರ್ಕಾರದಿಂದ ಅಧಿಸೂಚನೆ ಬಂದ ನಂತರ, ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಭಾರತದ 53 ನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ ಮತ್ತು ಫೆಬ್ರವರಿ 9, 2027 ರಂದು ನಿವೃತ್ತರಾಗುವವರೆಗೆ ಸೇವೆ ಸಲ್ಲಿಸಲಿದ್ದಾರೆ. ಅಂದರೆ ಸುಮಾರು 14 ತಿಂಗಳ ಕಾಲ ಸೂರ್ಯಕಾಂತ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿರಲಿದ್ದಾರೆ. ನವೆಂಬರ್ 24ರಂದು ಮುಖ್ಯ ನ್ಯಾಯಮೂರ್ತಿ ಗವಾಯಿ ಅವರು ನಿವೃತ್ತಿಯಾಗಲಿದ್ದಾರೆ. ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸಿಜೆಐ ಗವಾಯಿ ಅವರ ನಂತರ ಎರಡನೇ ಅತ್ಯಂತ ಹಿರಿಯ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿದ್ದಾರೆ.


