ನವದೆಹಲಿ: ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸುಪ್ರೀಂ ಕೋರ್ಟ್ನ 53ನೇ ಮುಖ್ಯ ನ್ಯಾಯವೂರ್ತಿಯಾಗಿ (ಸಿಜೆಐ) ಇಂದು ಪ್ರಮಾಣ ವಚನ ಸ್ವೀಕರಿಸಿದರು.. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಕುಮಾರಸ್ವಾಮಿ, ರಾಜನಾಥ್ ಸಿಂಗ್, ಜೆಪಿ ನಡ್ಡಾ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು
ಹಾಲಿ ಮುಖ್ಯ ನ್ಯಾಯಮೂರ್ತಿ ಭೂಷಣ್ ಆರ್. ಗವಾಯಿ ಅವರು ನವೆಂಬರ್ 23ರಂದು ನಿವೃತ್ತರಾದ ಹಿನ್ನೆಲೆಯಲ್ಲಿ, ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಈ ಉನ್ನತ ಹುದ್ದೆಯನ್ನು ವಹಿಸಿಕೊಂಡಿದ್ದು. ನ್ಯಾಯಮೂರ್ತಿ ಸೂರ್ಯಕಾಂತ್ ಅವರು 15 ತಿಂಗಳ (ಫೆಬ್ರವರಿ 9, 2027) ಕಾಲ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ.
ಹರಿಯಾಣದ ಹಿಸ್ಸಾರ್ನಲ್ಲಿ ವಕೀಲರಾಗಿ ವೃತ್ತಿ ಆರಂಭಿಸಿದ ಸೂರ್ಯಕಾಂತ್ ಅವರು, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ಗಳಲ್ಲಿ ನ್ಯಾಯಮೂರ್ತಿಯಾಗಿ ಹಾಗೂ ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕೆಲಸ ಮಾಡಿದ್ದಾರೆ.. ಬಳಿಕ ಸುಪ್ರಿಂ ಕೋರ್ಟ್ ನ್ಯಾಯಮೂರ್ತಿಯಾಗಿ ನಮಕಗೊಂಡರು.
ಸಂವಿಧಾನದ 370ನೇ ವಿಧಿ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಹಾಗೂ ಬಿಹಾರದಲ್ಲಿ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ ಕುರಿತು ಪ್ರಕರಣ ಸೇರಿದಂತೆ ಹಲವು ಮಹತ್ವದ ತೀರ್ಪು ನೀಡಿದ ಪೀಠಗಳಲ್ಲಿ ಸೂರ್ಯ ಕಾಂತ್ ಇದ್ದರು


