ಮೈಸೂರು: ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರದ ತುರಗನೂರು ಗ್ರಾಮದಲ್ಲಿ ನಡೆದಿದೆ.
ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ಕೊಲೆಯಾದ ದುರ್ದೈವಿಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಗಂಡನೇ ವಿದ್ಯಾಳ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ಮೃತ ವಿದ್ಯಾ ಅವರು ಭಜರಂಗಿ, ವಜ್ರಕಾಯ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲೂ ಸಕ್ರೀಯವಾಗಿದ್ದರು. ಸೋಮವಾರ ರಾತ್ರಿ ಗಂಡ ಹಾಗೂ ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡಿ ಹತ್ಯೆ ಪತಿ ನಂದೀಶ್ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.