ಮಂಡ್ಯ: ಮಂಡ್ಯ ಜಿಲ್ಲೆಯ ಮಲ್ಲನಾಯಕನ ಕಟ್ಟೆ ಗ್ರಾಮದಲ್ಲಿ ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಕಬಡ್ಡಿ ಪಂದ್ಯ ವೀಕ್ಷಿಸಲು ಸ್ಥಳದಲ್ಲಿ ಸಾಕಷ್ಟು ಜನ ನೆರೆದಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದಿದೆ. ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ
ಮಿಮ್ಸ್ ಆಸ್ಪತ್ರೆಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೇಟಿ
ದುರ್ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಮೇಲುಕೋಟೆ ಶಾಸಕ ಪುಟ್ಟಣ್ಣಯ್ಯ ಭೇಟಿ ನೀಡಿದ್ರು. ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯವನ್ನ ವಿಚಾರಿಸಿದ್ರು. ಮೃತಪಟ್ಟ ವ್ಯಕ್ತಿ ಹಾಗೂ ಗಾಯಾಳುಗಳ ಸಂಬಂಧಿಕರಿಂದ ಘಟನೆ ಬಗ್ಗೆ ಮಾಹಿತಿ ಪಡೆದ್ರು.
ಕಬಡ್ಡಿ ಆಯೋಜಕರ ವಿರುದ್ದ ಮೃತನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.