ಸುದ್ದಿ

ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ಅಟ್ಯಾಕ್!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಆ್ಯಸಿಡ್ ದಾಳಿ ನಡೆದಿದೆ. ಮೂವರು ಹೆಣ್ಣು ಮಕ್ಕಳ ಮೇಲೆ ಆ್ಯಸಿಡ್ ಹಾಕಿರುವ ಕಿರಾತಕ ವಿದ್ಯಾರ್ಥಿ ಕೇರಳ ಮೂಲದವನು ಎಂದು ಗುರುತಿಸಲಾಗಿದೆ.

ದ್ವಿತೀಯ ಪಿಯುಸಿ ಓದುತ್ತಿದ್ದ ಅಲೀನಾ ಸಿಬಿ,ಅರ್ಚನಾ, ಅಮೃತ ಎಂಬ ವಿದ್ಯಾರ್ಥಿನಿಯರ ಮೇಲೆ ದಾಳಿ ನಡೆದಿದೆ. ಮಂಗಳೂರಿನ ಕಡಬದ ಸರ್ಕಾರಿ ಕಾಲೇಜ್ ಆವರಣದಲ್ಲಿ ಘಟನೆ ನಡೆದಿದ್ದು, ಆರೋಪಿ ಮಾಸ್ಕ್ ಹಾಗೂ ಹ್ಯಾಟ್ ಧರಿಸಿಕೊಂಡು ಬಂದಿದ್ದ.. ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯವಾಗಿದೆ.
ಇನ್ನು ಆರೋಪಿ ಕೇರಳ ಮೂಲದವನೆಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.

ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನೆ ಮಾಡಲಾಗಿದೆ, ಈ ಮೂವರು ವಿದ್ಯಾರ್ಥಿನಿಯರು, ಶಾಲಾ ವರಾಂಡದಲ್ಲಿ ಪರೀಕ್ಷಾ ತಯಾರಿ ನಡೆಸುವ ವೇಳೆ ಘಟನೆ ನಡೆದಿದ್ದು, ಸ್ಥಳಕ್ಕೆ ಆಗಮಿಸಿರುವ ಪೊಲೀಸ್ರು ಅಬೀನ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button