Top Newsರಾಜಕೀಯರಾಜ್ಯಸುದ್ದಿ

ಮಾರಿಕಾಂಬಾ ದರ್ಶನ ವೇಳೆ ದೇವಸ್ಥಾನದಲ್ಲೇ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ!

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಇಂದಿನಿಂದ ಆರಂಭವಾಗಿರುವ ಐತಿಹಾಸಿಕ ಮಾರಿಕಾಂಬಾ ದೇವಿ ಜಾತ್ರೆಯ ಸಂದರ್ಭದಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದಾರೆ.

ಜಾತ್ರೆಯ ಮೊದಲ ದಿನವೇ ದೇವಿಯ ದರ್ಶನ ಪಡೆಯಲು ಕಾಗೋಡು ತಿಮ್ಮಪ್ಪ ಅವರು ದೇವಸ್ಥಾನಕ್ಕೆ ಆಗಮಿಸಿದ್ದರು. ಈ ವೇಳೆ ದೇವಸ್ಥಾನದಲ್ಲಿ ಭಕ್ತರ ಭಾರೀ ಜನಸಂದಣಿ ಇದ್ದಿದ್ದರಿಂದ ಅವರಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಜೊತೆಗೆ ಮಧುಮೇಹದ ಸಮಸ್ಯೆಯೂ ಇದ್ದಿದ್ದರಿಂದ ಅವರು ಆಯ ತಪ್ಪಿ ಕುಸಿದು ಬಿದ್ದಿದ್ದಾರೆ.

ಕೂಡಲೇ ಅವರನ್ನು ಸ್ಥಳೀಯ ಸಾಗರ ಉಪ ವಿಭಾಗೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರಾದ ವಿಕ್ರಂ ನೇತೃತ್ವದಲ್ಲಿ ತುರ್ತು ಚಿಕಿತ್ಸೆ ನೀಡಲಾಗಿದೆ. ಸದ್ಯಕ್ಕೆ ಬಂದಿರುವ ಮಾಹಿತಿಯ ಪ್ರಕಾರ, ಚಿಕಿತ್ಸೆಗೆ ಹಿರಿಯ ನಾಯಕರು ಸ್ಪಂದಿಸುತ್ತಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ. ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಶಾಸಕರಾಗಿ, ಮಂತ್ರಿಯಾಗಿ ಹಾಗೂ ಸ್ಪೀಕರ್ ಆಗಿ ಸುದೀರ್ಘ ಸೇವೆ ಸಲ್ಲಿಸಿರುವ 90 ವರ್ಷ ಮೇಲ್ಪಟ್ಟ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳು ಮತ್ತು ರಾಜಕೀಯ ಗಣ್ಯರು ಕಳವಳ ವ್ಯಕ್ತಪಡಿಸಿದ್ದು, ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button