Top Newsರಾಜಕೀಯಸುದ್ದಿ

FREEDOM TV BIG IMPACT: ಮದ್ಯ ಮಾರಾಟಗಾರರಿಂದ ‘ಕೈ’​ ಸರ್ಕಾರ 700 ಕೋಟಿ ಲೂಟಿ ಮಾಡಿದೆ: ಮೋದಿ ವಾಗ್ದಾಳಿ

ಮುಂಬೈ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮದ್ಯದಂಗಡಿಯ ಮಾಲೀಕರಿಂದ 700 ಕೋಟಿ ರೂಪಾಯಿ ಸುಲಿಗೆ ಮಾಡಿದೆ ಎಂದು ಮಹಾರಾಷ್ಟ್ರ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಆರೋಪ ಮಾಡಿದ್ದಾರೆ.

ಮಹಾರಾಷ್ಟ್ರದ ಅಕೋಲಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ನವೆಂಬರ್​ 6ರಂದು ನಿಮ್ಮ ಫ್ರೀಡಂ ಟಿವಿ ಪ್ರಸಾರ ಮಾಡಿದ್ದ ಕರ್ನಾಟಕದ ‘ಅಬಕಾರಿ ಕರ್ಮಕಾಂಡ’ದ ವಿಸ್ತೃತ ವರದಿ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಕರ್ನಾಟಕ, ತೆಲಂಗಾಣ ಮತ್ತು ಹಿಮಾಚಲ ಪ್ರದೇಶವನ್ನು ಕಾಂಗ್ರೆಸ್ ಸರ್ಕಾರ ಎಟಿಎಂಗಳಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ಮದ್ಯ ಮಾರಾಟಗಾರರಿಂದ ಕಾಂಗ್ರೆಸ್ ಸರ್ಕಾರ 700 ಕೋಟಿ ರೂಪಾಯಿ ಲೂಟಿ ಮಾಡಿದೆ. ಒಂದು ವೇಳೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದರೆ ಅವರು ಎಷ್ಟು ಲೂಟಿ ಮಾಡಬಹುದು ಎಂಬುದನ್ನು ನೀವೇ ಊಹಿಸಬಹುದು. ಎಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತೋ ಆ ರಾಜ್ಯ ಕಾಂಗ್ರೆಸ್‌ನ ರಾಜಮನೆತನಕ್ಕೆ ಎಟಿಎಂ ಆಗುತ್ತಿದೆ ಎಂದು ಪ್ರಧಾನಿ ಮೋದಿ ಟೀಕಿಸಿದ್ದಾರೆ.

ಕಾಂಗ್ರೆಸ್‌ ಪಕ್ಷಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ, ನ್ಯಾಯಾಲಯ ಅಥವಾ ದೇಶದ ಭಾವನೆಗಳ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ. ಕಾಂಗ್ರೆಸ್ ಜಾತಿ ಜಾತಿಗಳ ನಡುವೆ ಒಡಕು ಸೃಷ್ಟಿಸುತ್ತದೆ. ಆ ಪಕ್ಷ ನಮ್ಮ ಜಾತಿಗಳು ಒಂದಾಗಲು ಬಿಡಲೇ ಇಲ್ಲ.. ನಮ್ಮ ಜಾತಿಗಳು ಒಗ್ಗಟ್ಟಾಗಿ ಉಳಿಯದೇ ಪರಸ್ಪರ ಸಂಘರ್ಷಕ್ಕಿಳಿದರೆ ಅದರ ಲಾಭವನ್ನು ಕಾಂಗ್ರೆಸ್ ಪಡೆಯುತ್ತದೆ. ಎಸ್​ಸಿಗಳ ಹಕ್ಕುಗಳನ್ನು ಕಾಂಗ್ರೆಸ್ ಪಕ್ಷ ಕಸಿದುಕೊಳ್ಳುತ್ತದೆ. ಇದು ಅವರ ಪಿತೂರಿಯಾಗಿದೆ. ಹೀಗಾಗಿ ನೀವು ಜಾಗೃತರಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

 

Comments (0)

Your email address will not be published. Required fields are marked *

Back to top button