Top Newsರಾಜ್ಯಸುದ್ದಿ

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ-2024

ಬೆಂಗಳೂರು: ಕಲಾಭೂಮಿ ಪ್ರತಿಷ್ಠಾನ ಇದೇ ಮೊದಲ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಿದೆ. ನಟ, ನಿರ್ದೇಶಕ ಆಸ್ಕರ್ ಕೃಷ್ಣಾ ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ 69 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರತಿಭಾನ್ವಿತರು ಹಾಗೂ ಸಮಾಜದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಿದೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನಾಗರಬಾವಿಯ ಕಲಾಗ್ರಾಮ ಸಮುಚ್ಚಯದಲ್ಲಿ ನ. 29 ರಂದು ನಡೆಯಲಿದ್ದು ಕಾರ್ಯಕ್ರಮ ಬೆಳಿಗ್ಗೆ 9ಕ್ಕೆ ಉದ್ಘಾಟನೆ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ನಿರ್ದೇಶಕ ಆಸ್ಕರ್ ಕೃಷ್ಣಾ ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button