ಕಲಬುರಗಿ: ಸಂಸದ ಡಾ.ಉಮೇಶ್ ಜಾಧವ್ ಅವರ ಆಪ್ತನ ಬರ್ಬರ ಹತ್ಯೆ ನಡೆದಿದೆ. ಗಿರೀಶ್ ಚಕ್ರ ಬರ್ಬರವಾಗಿ ಹತ್ಯೆಯಾದ ಬಿಜೆಪಿ ಮುಖಂಡ.ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ ಕೊಲೆ ಮಾಡಲಾಗಿದೆ . ಗಿರೀಶ್ ಅವರನ್ನು ಕಳೆದ ನಾಲ್ಕು ದಿನಗಳ ಹಿಂದೆ ಕಲಬುರಗಿ ಬಿಎಸ್ಎನ್ಎಲ್ ಸಲಹಾ ಸಮಿತಿಗೆ ನಿರ್ದೇಶಕರಾಗಿ ಆಯ್ಕೆ ಮಾಡಿದ್ದರು.
ಇನ್ನು ಸಲಹಾ ಸಮಿತಿ ನಿರ್ದೇಶಕ ನೇಮಕ ಹಿನ್ನೆಲೆಯಲ್ಲಿ ಪಾರ್ಟಿ ಕೊಡುವ ನೆಪದಲ್ಲಿ ಜಮೀನಿಗೆ ಕರೆಸಿ ಸ್ನೇಹಿತರೇ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕಣ್ಣಿಗೆ ಕಾರಪುಡಿ ಎರಚಿ ಬರ್ಬರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಆರೋಪಿಗಾಗಿ ತೀವ್ರ ಶೋಧಕಾರ್ಯ ನಡೆಯುತ್ತಿದೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.