Monday, December 8, 2025
20.4 C
Bengaluru
Google search engine
LIVE
ಮನೆಸಿನಿಮಾKalki 2898 AD: ʼಕಲ್ಕಿʼ ಚಿತ್ರದ ನಾಯಕ ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ಈ...

Kalki 2898 AD: ʼಕಲ್ಕಿʼ ಚಿತ್ರದ ನಾಯಕ ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ಈ ವಿಡಿಯೊ ನೋಡಿ

ಟಾಲಿವುಡ್‌ ಮಾತ್ರವಲ್ಲದೆ, ಇಡೀ ಭಾರತ ಕಲ್ಕಿ ಕಲ್ಕಿ 2898 AD ಸಿನಿಮಾಕ್ಕಾಗಿ ಕಾಯುತ್ತಿದೆ. ಒಂದಾದ ನಂತರ ಬಂದು ವಿಶೇಷತೆಗಳನ್ನು ಈ ಸಿನಿಮಾ ಪ್ರೇಕ್ಷಕರ ಮಡಿಲಿಗೆ ಕಾಯುತ್ತಲೇ ಬರುತ್ತಿದೆ. ಈಗ ಇದೇ ಸಿನಿಮಾದಿಂದ ಮತ್ತೊಂದು ವಿಶೇಷವನ್ನು ಅನಾವರಣಗೊಳಿಸಿದೆ ಚಿತ್ರತಂಡ. ಹೌದು, ಪ್ಯಾನ್‍ ಇಂಡಿಯಾ ಸೂಪರ್ ಸ್ಟಾರ್ ಪ್ರಭಾಸ್‍ ಅಭಿನಯದ ಕಲ್ಕಿ 2898 AD ಬಿಡುಗಡೆಗೆ ಹೆಚ್ಚು ದಿನಗಳು ಉಳಿದಿಲ್ಲ. ಹೀಗಿರುವಾಗಲೇ ಇದೇ ಕಲ್ಕಿ ಚಿತ್ರದ ಐದನೇ ಸೂಪರ್ ಸ್ಟಾರ್ ಯಾರು ಎಂಬುದನ್ನು ಕಿರು ವಿಡಿಯೋ ಮೂಲಕ ಅನಾವರಣ ಮಾಡಿದೆ ಚಿತ್ರತಂಡ.

ಆ ಐದನೇ ಸೂಪರ್‌ಸ್ಟಾರ್‌ ಬೇರಾರು ಅಲ್ಲ, ಬುಜ್ಜಿ ಹೆಸರಿನ ಆಪ್ತ ಸ್ನೇಹಿತ. ಅಂದರೆ, ಬುಜ್ಜಿಯನ್ನು ಭವಿಷ್ಯದ ವಾಹನ ಎಂದೇ ಚಿತ್ರತಂಡ ಹೇಳಿಕೊಂಡು, ಅದರ ಕಿರು ಝಲಕ್‌ಅನ್ನು ಮೇ 22ರಂದು ಅನಾವರಣ ಮಾಡಿದೆ. ನಿರ್ದೇಶಕ ನಾಗ್ ಅಶ್ವಿನ್, ನಿರ್ಮಾಪಕರಾದ ಸಿ. ಅಶ್ವಿನಿ ದತ್, ಸ್ವಪ್ನಾ ದತ್ ಚಲಸಾನಿ, ಪ್ರಿಯಾಂಕಾ ದತ್ ಚಲಸಾನಿ ಸೇರಿ ಸುಮಾರು ಇಪ್ಪತ್ತು ಸಾವಿರ ಪ್ರೇಕ್ಷಕರು ಮತ್ತು ಮಾಧ್ಯಮದವರ ಸಮ್ಮುಖದಲ್ಲಿ ಹೈದರಾಬಾದ್‌ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಬುಜ್ಜಿಯನ್ನು ಪರಿಚಯಿಸಿದ್ದಾರೆ.

ಬುಜ್ಜಿ ಹೆಸರಿನ ಈ ಆಪ್ತ ಗೆಳೆಯ ಚಿತ್ರದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಗೆಳೆಯ. ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್‌ ಚಾನಲ್‍ನಲ್ಲಿ ಹೊಸ ವೀಡಿಯೋ ರಿಲೀಸ್‌ ಮಾಡಿದೆ. ವಿಡಿಯೋದಲ್ಲಿ ಬುಜ್ಜಿ ಹೇಗೆಲ್ಲ ಕೆಲಸ ಮಾಡುತ್ತೆ, ಭವಿಷ್ಯದ ಆಪ್ತ ಸ್ನೇಹಿತ ಎಂದು ಏಕೆ ಕರೆಯಲಾಗುತ್ತದೆ ಎಂಬುದು ಗೋಚರವಾಗುತ್ತದೆ.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments