ಮೈಸೂರು : ಕಳೆದ ವಿಧಾನಸಭಾ ಚುನಾವಣೆ ವೇಳೆ ನನಗೂ ಟಿಕೆಟ್ ಮಿಸ್ ಆಯ್ತು. ಆಗ ನಾನು ಪಕ್ಷದಲ್ಲೇ ಉಳಿದುಕೊಂಡು ಕೆಲಸ ಮಾಡಿದ್ದೇನೆ ಎಂದು ಮಾಜಿ ಸಚಿವ ಎಸ್. ಎ. ರಾಮದಾಸ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು ಕೇಂದ್ರದಲ್ಲಿ ಇದುವರೆಗೂ ಅಭ್ಯರ್ಥಿ ಯಾರೆಂಬುದು ಅಂತಿಮವಾಗಿಲ್ಲ. ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಕಾರಣಕ್ಕೆ ಸುದ್ದಿಗೋಷ್ಠಿ ಕರೆದಿದ್ದೇವೆ. ಮೈಸೂರು ಅರಸರ ಕೊಡುಗೆಗಳ ಬಗ್ಗೆ ಅಪಾರ ಗೌರವವಿದೆ. ಯದುವೀರ್ ಒಡೆಯರ್ ರವರು ಜನರ ಜೊತೆ ಬೆರೀತಾರ ಇಲ್ಲವಾ ಎಂಬುದನ್ನ ರಾಷ್ಟ್ರೀಯ ನಾಯಕರು ನಿರ್ಧರಿಸುತ್ತಾರೆ ಎಂದು ಪ್ರತಾಪ್ ಸಿಂಹಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು.
ರಾಮದಾಸ್ ರವರು ಪಕ್ಷಕ್ಕಾಗಿ ಕೆಲಸ ಮಾಡಿದ್ದರು ಎಂದು ಪ್ರತಾಪ್ ಸಿಂಹರವರೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇವತ್ತಿಗೂ ನಮಗೆ ಪ್ರತಾಪ್ ಸಿಂಹ ಲೀಡರ್. ಅವರಿಗೆ ಗೌರವ ಕೊಟ್ಟೆ ಕೊಡುತ್ತೇವೆ. ಅವರಿಗೆ ಟಿಕೆಟ್ ಕೊಟ್ಟರು ಕೆಲಸ ಮಾಡುತ್ತೇವೆ ಎಂದು ರಾಮದಾಸ್ ಸ್ಪಷ್ಟನೆ ನೀಡಿದರು