ರಾಜಕೀಯರಾಜ್ಯಸುದ್ದಿ

ಎಫ್‍ಎಸ್‍ಎಲ್ ವರದಿ ಬಹಿರಂಗಕ್ಕೆ ಬಿಜೆಪಿ ನಿಯೋಗ ಪಟ್ಟು

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣ ಬಹಿರಂಗಕ್ಕೆ ಬಿಜೆಪಿ ನಿಯೋಗ ಒತ್ತಾಯ. ಡಿ.ಜಿ ಮತ್ತು ಐಜಿಪಿಗೆ ಮನವಿ ಸಲ್ಲಿಸಿದ ಬೆಂಗಳೂರು ನಗರದ ಶಾಶಕರು. ಶಾಸಕರುಗಳಾದ ಎಲ್.ಎ. ರವಿಸುಬ್ರಹ್ಮಣ್ಯ, ಸಿ.ಕೆ. ರಾಮಮೂರ್ತಿ, ಉದಯ ಬಿ. ಗರುಡಾಚಾರ್ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ಇಂದು ನೃಪತುಂಗ ರಸ್ತೆಯಲ್ಲಿರುವ ಡಿ.ಜಿ ಮತ್ತು ಐಜಿಪಿಗೆ ಪ್ರಧಾನ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದರು.

ಫೆಬ್ರವರಿ 27ರಂದು ವಿಧಾನಸೌಧದಲ್ಲಿ ರಾಜ್ಯಸಭಾ ಸಂಸದ ಸೈಯದ್ ನಾಸೀರ್ ಹುಸೇನ್ ಅವರ ಬೆಂಬಲಿಗರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದರು. ನಂತರ ಗೃಹ ಸಚಿವ ಡಾ. ಪರಮೇಶ್ವರ್ ಅವರು ಎಫ್‍ಎಸ್‍ಎಲ್ ವರದಿಯನ್ನು ಶೀಘ್ರವೇ ಬಹಿರಂಗ ಮಾಡುವ ಭರವಸೆ ನೀಡಿದ್ದರು. ಘಟನೆ ನಡೆದು ಒಂದು ವಾರ ಕಳೆದರೂ ಎಫ್‍ಎಸ್‍ಎಲ್ ವರದಿ ಇನ್ನು ಬಂದಿಲ್ಲ ಎಂದು ಸರ್ಕಾರ ಸಬೂಬು ಹೇಳುತ್ತಿದೆ.ಇನ್ನುಸತ್ಯ ತಿಳಿಸಲು ವಿಳಂಬವೇಕೆ?

ಸತ್ಯ ಸಂಗತಿಯನ್ನ ಮರೆಮಾಚಲು ಮತ್ತು ತನಿಖೆಯ ದಿಕ್ಕನ್ನು ತಪ್ಪಿಸುವ ಉನ್ನಾರ ನಡೆಯುತ್ತಿದೆ.ನಿಮ್ಮ ಮೇಲೆ ಯಾವುದಾದರೂ ಒತ್ತಡವಿದೆಯೇ ಎಂದು ಪ್ರಶ್ನಿಸಲಾಗಿದೆ. ಇಂತಹ ವಿಳಂಬದಿಂದ ಮುಂದಿನ ದಿನಗಳಲ್ಲಿ ಈ ರೀತಿ ದೇಶವಿರೋಧಿ ಮತ್ತು ಸಮಾಜಘಾತುಕ ಕೆಲಸ ಮಾಡುವ ಜನರಿಗೆ ಮತ್ತಷ್ಟು ಬಲ ಬಂದಂತಾಗುತ್ತದೆ ಎಂದು ಮನವಿ ಮಾಡಿದರು.

ಇನ್ನು..ರಾಜ್ಯ ಸರ್ಕಾರದಿಂದ ಪ್ರಾಮಾಣಿಕ ಮತ್ತು ತ್ವರಿತ ಪ್ರತ್ಯುತ್ತರದ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು.

Comments (0)

Your email address will not be published. Required fields are marked *

Back to top button