ಸಿನಿಮಾ

ನಿವೃತ್ತ ಐಎಎಸ್​ ಅಧಿಕಾರಿ ಕೆ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ

ಹೃದಯಘಾತವಾಗಿ ಕಳೆದ 12ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆ. ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ‘ಬಾ ನಲ್ಲೆ ಮಧುಚಂದ್ರಕೆ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದ ಐಎಎಸ್ ಅಧಿಕಾರಿ ಕೆ ಶಿವರಾಮ್ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ರು.

ನಟ, ರಾಜಕಾರಣಿ ಕೆ ಶಿವರಾಮ್ ಪ್ರಸ್ತುತ ಸಂಪಂಗಿರಾಮ ನಗರದ ಹೆಚ್ ಜಿ ಎಸ್ ಆಸ್ಪತ್ರೆಯಲ್ಲಿನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 12 ದಿನದ ಹಿಂದೆ ಕೆ ಶಿವರಾಮು ಅವರಿಗೆ ತೀವ್ರ ಹೃದಯಾಘಾತ ಅಗಿತ್ತು ಎನ್ನಲಾಗಿದೆ. ಈಗ ಕೆ ಶಿವರಾಂ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಈಗ ಅವರಿಗೆ 71 ವರ್ಷ ವಯಸ್ಸಾಗಿದೆ. ಕೆ ಶಿವರಾಮುರವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅವರ ಅಭಿಮಾನಿಗಳು, ಆಪ್ತರು ಹಾಗೂ ಹಿತೈಷಿಗಳು ಹಾರೈಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button