ಸಿನಿಮಾಸುದ್ದಿ

ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಭೇಟಿ

ಬೆಂಗಳೂರು: ಇಡೀ ದೇಶದಲ್ಲೇ ಸಂಚಲನ ಮೂಡಿಸಿದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ  ಬಳಿಕ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮುಜುಗರವಾಗಿದೆ. ನಟ ದರ್ಶನ್‌ ಕೃತ್ಯವನ್ನು ಖಂಡಿಸಿರುವ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಭೇಟಿ ನೀಡಿ ಸ್ವಾಂತನ ಹೇಳಲಿದೆ.

ಸಾರಾ ಗೋವಿಂದು, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ವಾಣಿಜ್ಯ ಮಂಡಳಿ ಅಧ್ಯಕ್ಷ ಸುರೇಶ್ ಸೇರಿದಂತೆ 15ಕ್ಕೂ ಹೆಚ್ಚು ಸದಸ್ಯರು ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಲಿದ್ದಾರೆ. ಬಳಿಕ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಯಿದೆ.

ಆರೋಪಿ ನಟ ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡುವುದು ಹಾಗೂ ಅಸಹಕಾರ ನೀಡುವುದರ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಆರೋಪ ಸಾಬೀತಾದರೆ ಅಸಹಕಾರ ನೀಡುವ ವಿಚಾರಾಗಿ ನಿರ್ಧಾರ ಮಾಡಲಾಗುತ್ತದೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ್ಯ ಎನ್.ಎಂ ಸುರೇಶ್ ಜೂ.13ರಂದು ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

ಈ ಪ್ರಕರಣವನ್ನು ನಾವು ಖಂಡಿಸುತ್ತೇವೆ. ಅವರನ್ನು ತಕ್ಷಣಕ್ಕೆ ಬ್ಯಾನ್ ಮಾಡಲು ಆಗುವುದಿಲ್ಲ. ಬ್ಯಾನ್ ಮಾಡಲು, ಕಲಾವಿದರ ಸಂಘ ಹಾಗೂ ಇತರ ಅಂಗ ಸಂಸ್ಥೆಗಳು ಭಾಗಿಯಾಗಬೇಕು ಎಂದು ಅವರು ಹೇಳಿದ್ದಾರೆ.

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Comments (0)

Your email address will not be published. Required fields are marked *

Back to top button