ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುವ ಹಾಗೂ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡ ಲೇಬಲ್, ಹೆಸರು ಡೈರೆಕ್ಷನ್ ಸೇರಿದಂತೆ ಎಲ್ಲವೂ ಕನ್ನಡದಲ್ಲಿ ಇರಬೇಕೆಂದು ರಾಜ್ಯ ಸರ್ಕಾರ ಇಂದು ಅಧಿಕೃತ ಸುತ್ತೋಲೆ ಹೊರಡಿಸಿದೆ. ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಯಾವುದೇ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಉಮಾದೇವಿ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.