ಬೆಂಗಳೂರು: ಕನ್ನಡದಲ್ಲಿ ಮಹಿಳಾ ಕ್ರಿಕೆಟ್ ಆಧಾರಿತ ಸಿನಿಮಾ ʻಸಹಾರಾʼ ಇಂದು ತೆರೆ ಕಾಣುತ್ತಿದೆ. ಸಾರಿಕಾ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ಸಹಾರಾ” ಚಿತ್ರ ಕನ್ನಡ ಚಿತ್ರರಂಗಲ್ಲೇ ಮೊದಲ ಪ್ರಯತ್ನ ಎಂದರೆ ಉತ್ಪ್ರೇಕ್ಷೆಯಲ್ಲ. ಯಾಕೆಂದರೆ ಚಿತ್ರಕಥೆಯು ಮಹಿಳಾ ಕ್ರಿಕೆಟ್ ಪಟು ಕುರಿತಾದದ್ದು.
ಮಂಡ್ಯದ ಹುಡುಗಿ ಒಬ್ಬಳು ಮಹಿಳಾ ಕ್ರಿಕೆಟ್ ಪಟು ಆಗುವ ಕನಸನ್ನು ಕಂಡು, ಅದನ್ನು ನನಸಾಗಿಸುವ ಹಾದಿಯಲ್ಲಿ ಆಕೆ ಎದುರಿಸುವ ಅಡೆತಡೆಗಳು, ಹೇಗೆ ಅವುಗಳನ್ನು ಮೀರಿ ಸಾಧನೆಯ ಮೆಟ್ಟಿಲೇರುತ್ತಾಳೆ,ಎಲ್ಲವನ್ನೂ ಕಥೆ ಎಳೆ ಎಳೆಯಾಗಿ ಬಿಚ್ಚಿಡುತ್ತದೆ. ಈ ನಿಟ್ಟಿನಲ್ಲಿ “ಸಹಾರಾ” ಚಿತ್ರ ಸಿನಿಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ. ಅಷ್ಟೇ ಅಲ್ಲದೆ, ಗೋಲ್ಡನ್ ಸ್ಟಾರ್ ಗಣೇಶ್ “ಸಹಾರಾ” ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡಿರುವುದು ಎಲ್ಲೆಡೆ ಸದ್ದು ಮಾಡುತ್ತಿದ
“ಸಹಾರಾ” ಚಿತ್ರಕ್ಕೆ ಮಂಜೇಶ್ ಭಗವತ್ ಆಕ್ಷನ್ ಕಟ್ ಹೇಳಿದ್ದು, ಅಂಕುಶ್ ರಜತ್ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಸೂರಜ್ ಜೋಯಿಸ್ ಸಂಗೀತ ಸಂಯೋಜನೆ ಮಾಡಿದ್ದು, ಆಂಟೊನಿ ರುತ್ ವಿನ್ಸೆಂಟ್ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ. ವಿಜಯ್ ಎಂ ಕುಮಾರ್ ಸಂಕಲನಕಾರರಾಗಿದ್ದಾರೆ. ಪಾತ್ರಕ್ಕಾಗಿಯೇ ಸಾರಿಕಾ ಅವರು ರಣಜಿ ಆಟಗಾರರಾದ. ಕೆ.ಬಿ. ಪವನ್ ಬಳಿ ಕ್ರಿಕೆಟ್ ಆಟದ ಬಗ್ಗೆ ತರಬೇತಿ ಪಡೆದುಕೊಂಡು ಬಂದು ನಂತರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.
ಕಳೆದ ಎಂಟು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಹನಿರ್ದೇಶಕರಾಗಿ ಕೆಲಸ ಮಾಡಿರುವ ಮಂಜೇಶ್ ಭಗವತ್ ಅವರು ಇದೇ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತು ಈ ಚಿತ್ರವನ್ನು ಹೊರತರುತ್ತಿದ್ದಾರೆ. ಮಾ ಕ್ರಿಯೆಷನ್ಸ್ ಪ್ರಥಮ ನಿರ್ಮಾಣದ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ- ಚಿತ್ರಕಥೆ – ಸಂಭಾಷಣೆ ರಚಿಸಿದ್ದಾರೆ.
ಉಳಿದಂತೆ ತಾರಾಬಳಗದಲ್ಲಿ ಮಂಜುನಾಥ ಹೆಗಡೆ, ಕುರಿ ಸುನಿಲ್, ಅಂಕುಶ್ ರಜತ್, ರಂಜನ್, ಮಂಜುಳಾ ರೆಡ್ಡಿ, ಪ್ರಕಾಶ್ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ. ಮಹಿಳಾ ಕ್ರಿಕೆಟ್ ಆಧರಿಸಿದ ಈ ಚಿತ್ರಕ್ಕೆ ಪಿ.ಆರ್.ಸಂಸ್ಥೆ ಸಪೋರ್ಟ್ ಮಾಡಿದೆ. ಆಡಿಯೋ ಹಕ್ಕನ್ನು ಕೂಡ ಪಡೆದುಕೊಂಡಿದೆ. ಕೆಆರ್.ಜಿ ಸಂಸ್ಥೆ ಚಿತ್ರ ವಿತರಣೆ ಮಾಡುತ್ತಿದೆ.
ಕ್ರಿಕೆಟ್ ಆಧರಿಸಿದ ಈ ಚಿತ್ರಕ್ಕೆ ಕಿಚ್ಚ ಸುದೀಪ್ ನಿರೂಪಣೆ ಮಾಡಿದ್ದಾರೆ. ಮಂಡ್ಯದ ಹುಡುಗಿಯ ಕ್ರಿಕೆಟ್ ಕನಸಿನ ಕಥೆಯನ್ನ ನಿರೂಪಿಸಿದ್ದಾರೆ. ಇದರೊಟ್ಟಿಗೆ ಚಿತ್ರಕ್ಕೆ ಆಂಥೋನಿ ರುತ್ ವಿನ್ಸೆಂಟ್ ಕ್ಯಾಮರಾವರ್ಕ್ ಮಾಡಿದ್ದಾರೆ. ಸೂರಜ್ ಜೋಯಿಸ್ ಸಂಗೀತ ಕೊಟ್ಟಿದ್ದಾರೆ. ಥ್ರಿಲ್ಲರ್ ಮಂಜು ಸಾಹಸ, ಸಂತೋಷ್ ಶೇಖರ್ ಕೊರಿಯೋಗ್ರಫಿ
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com