ವಿಜಯನಗರ : ವಿಜಯನಗರದ ಗತವೈಭವ ಸಾರುವ ಹಂಪಿ ಉತ್ಸವವು ಇದೇ ಫೆಬ್ರವರಿ 2 ರಿಂದ ಮೂರು ದಿನಗಳ ಕಾಲ ನಡೆಯಲಿದೆ.
ವಿಶ್ವ ವಿಖ್ಯಾತ ಹಂಪಿ ಉತ್ಸವದ ಲಾಂಚನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಶಾಸಕ ರಾಘವೇಂದ್ರ ಹಿಟ್ನಾಳ್, ವಿಜಯನಗರ ಜಿಲ್ಲಾಧಿಕಾರಿ ದಿವಾಕರ್, ನಟ ಸಾಧು ಕೋಕಿಲ, ನಿರ್ದೇಶಕಿ ಕವಿತಾ ಲಂಕೇಶ್ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಹಂಪಿ ಉತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದಿವಾಕರ್ ಅವರೊಂದಿಗೆ ಪೂರ್ವ ಸಿದ್ಧತೆಗಳ ಬಗ್ಗೆ ಸಚಿವರು ಮಾಹಿತಿ ಪಡೆದರು.