ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಕಲಾದಗಿಯ ರಂಭಾಪುರಿ ಪಂಚಗೃಹ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಆಯ್ಕೆ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಭಕ್ತರು ಹಾಗೂಸ್ವಾಮೀಜಿ ನಡುವಿನ ವಿವಾದ ತಾರಕಕ್ಕೇರಿದ್ದು, ವಿವಾದ ಕೋರ್ಟ್ ನಲ್ಲಿದ್ದಾಗಲೇ ಗಂಗಾಧರ ಸ್ವಾಮೀಜಿ, ಮಠಕ್ಕೆ ಸೇರಿದ ಹೊಲ ಊಳುಮೆ ಮಾಡಿದ್ದಾರೆ. ಇದರಿಂ ಭಕ್ತರ ಆಕ್ರೋಶಕ್ಕೆ ಕಾರಣವಾಗಿದ್ದು, ಕಲಾದಗಿ ಗುರುಲಿಂಗೇಶ್ವರ ಮಠದಲ್ಲಿ ಮಹಿಳಾ ಭಕ್ತರಾದಿಯಾಗಿ ಎಲ್ಲರೂ ಪ್ರತಿಭಟನೆಗಿಳಿದಿದ್ದಾರೆ. ಈ ವೇಳೆ ರಂಭಾಪುರಿ ಶ್ರೀಗಳ ಕಾರಿನ ಮೇಲೆ ಮಹಿಳೇಯೋರ್ವರು ಚಪ್ಪಲಿ ಎಸೆದಿದ್ದಾರೆ.
ರಂಭಾಪುರಿ ಶ್ರೀಗಳು ಬಾಗಲಕೋಟೆಯಿಂಧ ಕಲಾದಗಿ ಮಾರ್ಗವಾಗಿ ಉದಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಈ ವೆಳೆ ಭಕ್ತರು, ರಂಭಾಪುರಿ ಶ್ರೀ ಪ್ರಯಾಣೀಸುತ್ತಿದ್ದ ಕಾರನ್ನು ಅಡ್ಡಹಾಕಿ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೇ ಈ ವೇಳೆ ಮಹಿಳೆಯೋರ್ವರು ಕಾರಿನ ಮೇಲೆ ಚಪ್ಪಲಿ ಎಸೆದಿದ್ದಾರೆ.