ಬೆಂಗಳೂರು: ನರೇಂದ್ರ ಮೋದಿಯವರನ್ನು ಇನ್ನೊಮ್ಮೆ ಪ್ರಧಾನಿಯಾಗಿ ಮಾಡಿ ದೇಶವನ್ನು ಇನ್ನಷ್ಟು ಬಲಿಷ್ಟಗೊಳಿಸಬೇಕೆಂಬ ಬಯಕೆ ದೇಶಾದ್ಯಂತ ಇದೆ. ಹಾವೇರಿ ಗದಗ ಕ್ಷೇತ್ರದ ಜನರಲ್ಲಿಯೂ ಇದೆ. ಹೀಗಾಗಿ ನನ್ನನ್ನು ಅತ್ಯಂತ ಹೆಚ್ಚು ಮತದಿಂದ ಗೆಲ್ಲಿಸಿ ಕಳಿಸುತ್ತಾರೆ ಎಂಬ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರ ಆಶೀರ್ವಾದದಿಂದ ಕ್ಷೇತ್ರದ ಅಭಿವೃದ್ಧಿ ಯನ್ನು ಚಾಚೂ ತಪ್ಪದೇ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಮಾಜಿ ಡಿಸಿಎಂ ಈಶ್ವರಪ್ಪ ಕುರಿತು ಕೇಳಿದ ಪ್ರಶ್ಬೆಗೆ ಉತ್ತರಿಸಿದ ಅವರು, ಅವರು ಸುಮಾರು ಆರು ತಿಂಗಳಿಂದ ಆಕ್ಷೇತ್ರದಲ್ಲಿ ಓಡಾಡಿದ್ದಾರೆ‌. ನಾನು ಪಾರ್ಲಿಮೆಂಟರಿ ಬೋರ್ಡ್ ನಲ್ಲಿ ಕಾಂತೇಶ್ ಅವರಿಗೆ ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಟಿಕೆಟ್ ಕೊಡಬೇಕು ಎಂದು ಮನವಿ ಮಾಡಿದ್ದೆ. ಪಕ್ಷದ ರಾಷ್ಟ್ರೀಯ ನಾಯಕರು ಗೆಲುವಿನ ಲೆಕ್ಕಾಚಾರ ಇಟ್ಟುಕೊಂಡು ನನ್ನನ್ನು ಆಯ್ಕೆ ಮಾಡಿದ್ದಾರೆ. ಈಶ್ವರಪ್ಪ ಅವರು ಹಿರಿಯರಿದ್ದಾರೆ. ಪಕ್ಷ ಅವರಿಗೆ ಸೂಕ್ತ ಗೌರವ ನೀಡುತ್ತದೆ ಎನ್ನುವ ವಿಶ್ವಾಸ ಇದೆ. ಕುರುಬ ಸಮುದಾಯದೊಂದಿಗೆ ನನಗೆ ಉತ್ತಮ ಸಂಬಂಧ ಇದೆ ಎಂದು ಹೇಳಿದ್ದಾರೆ.

ರಾಜಕಾರಣದಲ್ಲಿ ಅನುಭವದ ಜೊತೆಗೆ ಹೊಸ ಯುವಕರಿಗೆ ಅವಕಾಶ ಕೊಡಬೇಕೆಂಬ ಕಾರಣದಿಂದ ಹೊಸ ಮುಖಗಳಿಗೆ ನೀಡಿದ್ದಾರೆ. ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಬೆಂಗಳೂರು ಉತ್ತರದಲ್ಲಿ ಸದಾನಂದಗೌಡರು ಸ್ಪರ್ದಿಸಬೇಕೆಂಬುದು ಅಲ್ಲಿನ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಇತ್ತು. ಅವರೂ ಮತ್ತು ಈಶ್ವರಪ್ಪ ಅವರ ಬಗ್ಗೆ ಪಕ್ಷದ ರಾಷ್ಟ್ರೀಯ ನಾಯಕರು ಒಳ್ಳೆಯ ಅವಕಾಶ ನೀಡುವ ಸಾಧ್ಯತೆ ಇದೆ. ಜಗದೀಶ್ ಶೆಟ್ಟರ್ ಅವರು ನಮ್ಮ ಪಕ್ಷದ ನಾಯಕರು ಪಕ್ಷದಲ್ಲಿ ಯಾವುದೇ ಒಳ ಹೊಡೆತ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

By admin

Leave a Reply

Your email address will not be published. Required fields are marked *

Verified by MonsterInsights