ಬೆಂಗಳೂರು: ಕೊಪ್ಪಳ ಲೋಕಸಭಾ ಕ್ಷೇತ್ರದ ಕಾರ್ಯಕರ್ತರ ಭಾವನೆಯನ್ನು ಪಕ್ಷದ ಹೈಕಮಾಂಡ್ ಗೆ ತಿಳಿಸುವ ಕೆಲಸವನ್ನು ಮಾಡುವುದಾಗಿ ರಾಜ್ಯ ನಾಯಕರು ಹೇಳಿದ್ದಾರೆ. ಹೈಕಮಾಂಡ್ ನಾಯಕರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೊ ಅದಕ್ಕೆ ಎಲ್ಲರೂ ಬದ್ದರಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕೊಪ್ಪಳ ಲೋಕಸಭಾ ಕ್ಷೇತ್ರದ ಕಾರ್ಯಕರ್ತರೊಂದಿಗೆ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರ ಅಭಿಪ್ರಾಯವನ್ನು ಹೈಕಮಾಂಡ್ ಗೆ ತಿಳಿಸಲಾಗುವುದು. ಅವರ ತೀರ್ಮಾನದಂತೆ ಎಲ್ಲರೂ ನಡೆದುಕೊಳ್ಳಲು ಸೂಚಿಸಲಾಗಿದೆ. ಅಲ್ಲದೆ, ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಎಲ್ಲರೂ ಕೆಲಸ ಮಾಡಬೇಕು ಎಂದು ಸೂಚಿಸಲಾಗಿದೆ.
ಕರಡಿ ಸಂಗಣ್ಣ ಅವರ ಜನಪ್ರೀಯತೆ ಎಲ್ಲರಿಗೂ ಗೊತ್ತಿದೆ. ಪಕ್ಷ ಮುಂದಿನ ದಿನಗಳಲ್ಲಿ ಅವರಿಗೆ ಸೂಕ್ತ ಸ್ಥಾನ ನೀಡುವ ಬಗ್ಗೆಯೂ ಆಲೋಚನೆ ಮಾಡಲಾಗಿದೆ ಎಂದು ಹೇಳಿದರು.