ಬೆಂಗಳೂರು: ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಮರಳಿ ಬಂದಿರುವುದು ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕೊಪ್ಪಳ ಸಂಸದ ಕರಡಿ ಸಂಗಣ್ಣ ಹಾಗೂ ಅವರ ಬೆಂಬಲಿಗರು ತಮ್ಮನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಅವರು ಉತ್ತರ ಕರ್ನಾಟಕ ಭಾಗದಲ್ಲಿ ತಮ್ಮದೇ ಆದ ಪ್ರಭಾವ ಹೊಂದಿದ್ದಾರೆ. ಅವರು ಪಕ್ಷಕ್ಕೆ ವಾಪಸ್ ಬಂದಿರುವುದರಿಂದ ಆ ಭಾಗದಲ್ಲಿ ಪಕ್ಷಕ್ಕೆ ದೊಡ್ಡ ಮಟ್ಟದ ಅನುಕೂಲ ಅನುಕೂಲವಾಗಲಿದೆ ಎಂದು ಹೇಳಿದರು.
ಇನ್ನು ಸಂಸದ ಕರಡಿ ಸಂಗಣ್ಣ ಅವರಿಗೆ ಟಿಕೆಟ್ ತಪ್ಪಿರುವುದರಿಂದ ಅವರ ಬೆಂಬಲಿಗರೊಂದಿಗೆ ಬಂದು ತಮಗೆ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ. ಅವರ ಭಾವನೆಗಳನ್ನು ಪಕ್ಷದ ಮುಖಂಡರ ಗಮನಕ್ಕೆ ತರುತ್ತೇನೆ ಎಂದು ಹೇಳಿದರು.