ರಾಜ್ಯಸುದ್ದಿ

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

ಬೆಂಗಳೂರು: ಬೆಂಗಳೂರು ಮಹಾನಗರದ ಕುಡಿಯುವ ನೀರಿನ ವೈಫಲ್ಯವನ್ನು ಖಂಡಿಸಿ ಹಾಗೂ ರಾಜ್ಯದ ಜನರಿಗೆ ಕುಡಿಯುವ ನೀರು ಕೊಡದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಬೆಂಗಳೂರು ಮಹಾನಗರದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿದರು. ಸರ್ಕಾರದ ವೈಫಲ್ಯವನ್ನು ಖಂಡಿಸಿ ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಲಾಯಿತು.

ಸಮರ್ಪಕವಾಗಿ ಬರಗಾಲ ನಿರ್ವಹಣೆ ಮಾಡುವಲ್ಲಿ ಸರ್ಕಾರ ವಿಫಲಾಗಿದೆ ಎಂದು ಆಕ್ರೋಶ ಹೊರಹಾಕಿದರು. ಕುದುರೆಗಾಡಿಯ ಮೇಲೆ ಖಾಲಿ ಟ್ಯಾಂಕ್ ಇಟ್ಟು, ಖಾಲಿ ಕೊಡ ಹಿಡಿದು ಸರ್ಕಾರದ ವಿರುದ್ಧ ನೀರಿಲ್ಲಾ ನೀರಿಲ್ಲಾ ಎಂದು ಭಜನೆ ಮಾಡುವುದರ ಮೂಲಕ ಬಿಜೆಪಿ ನಾಯಕರು ಪ್ರೋಟೆಸ್ಟ್ ನಡೆಸಿದರು.

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರು ಕೇಂದ್ರದ ಸಂಸದ ಪಿ.ಸಿ. ಮೋಹನ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ರವಿಕುಮಾರ್, ಬಸವನಗುಡಿಯ ಶಾಸಕ ರವಿ ಸುಬ್ರಹ್ಮಣ್ಯ, ಜಯನಗರದ ಶಾಸಕ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಸಿ.ಕೆ.ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಅಧ್ಯಕ್ಷ ಸಪ್ತಗಿರಿ ಗೌಡ, ರಾಜ್ಯದ ಮುಖ್ಯ ವಕ್ತಾರ ಅಶ್ವತ್ಥ್ ನಾರಾಯಣ ಗೌಡ, ಮಾಜಿ ಮಹಾಪೌರರು, ಮೋರ್ಚಾಗಳ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಬೆಂಗಳೂರು ಮಹಾನಗರದ ಎಲ್ಲಾ ಮಂಡಲಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Comments (0)

Your email address will not be published. Required fields are marked *

Back to top button